Last Updated:
ಮಂಗಳವಾರ ಜಪಾನ್ ವಿರುದ್ಧ ನಡೆಯಲಿರುವ ಏಕೈಕ ಟಿ20 ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವಾಗಲೇ, ಯುವ ಭಾರತೀಯ ಸ್ಪಿನ್ನರ್ ವಿಪ್ರಜ್ ನಿಗಮ್ ಅನಿರೀಕ್ಷಿತ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಗಾಯಗೊಂಡ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಬದಲಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಉತ್ತರ ಪ್ರದೇಶದ 22 ವರ್ಷದ ಈ ಕ್ರಿಕೆಟಿಗ, ಇದೀಗ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪದ ಕೇಂದ್ರಬಿಂದುವಾಗಿದ್ದಾರೆ.
ಜಪಾನ್ ವಿರುದ್ಧದ (India vs Japan) ಐತಿಹಾಸಿಕ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿರುವ ಟೀಮ್ ಇಂಡಿಯಾದ ಯುವ ಸ್ಪಿನ್ನರ್ ವಿಪ್ರಜ್ ನಿಗಮ್ (Vipraj Nigam) ಗಂಭೀರ ಆರೋಪವೊಂದನ್ನು ಎದುರಿಸುತ್ತಿದ್ದಾರೆ. ಮದುವೆಯ ನೆಪದಲ್ಲಿ ತನ್ನನ್ನು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ಜಪಾನ್ ವಿರುದ್ಧ ನಡೆಯಲಿರುವ ಏಕೈಕ ಟಿ20 ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವಾಗಲೇ, ಯುವ ಭಾರತೀಯ ಸ್ಪಿನ್ನರ್ ವಿಪ್ರಜ್ ನಿಗಮ್ ಅನಿರೀಕ್ಷಿತ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಗಾಯಗೊಂಡ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಬದಲಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಉತ್ತರ ಪ್ರದೇಶದ 22 ವರ್ಷದ ಈ ಕ್ರಿಕೆಟಿಗ, ಇದೀಗ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪದ ಕೇಂದ್ರಬಿಂದುವಾಗಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ನೋಯ್ಡಾದ ಹೋಟೆಲ್ ಒಂದರಲ್ಲಿ ತನ್ನನ್ನ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಎಂದು ಹೈದರಾಬಾದ್ ಮೂಲದ ಯುವತಿಯೊಬ್ಬರು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಅವರು ಭಾನುವಾರ ಉತ್ತರ ಪ್ರದೇಶದಲ್ಲಿರುವ ನಿಗಮ್ ಅವರ ನಿವಾಸದ ಮುಂದೆ ಹಲವು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.
ಪ್ರಸ್ತುತ ಜಪಾನ್ ಪ್ರವಾಸದಲ್ಲಿರುವ ಕ್ರಿಕೆಟಿಗರೊಂದಿಗೆ ನೇರವಾಗಿ ಮಾತನಾಡಲು ಬಯಸಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದ ಅವರು, ಅನಗತ್ಯ ಗದ್ದಲ ಸೃಷ್ಟಿಸುವುದು ತಮ್ಮ ಉದ್ದೇಶವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಗಮ್ ಅವರ ತಂದೆ ಮಧ್ಯಪ್ರವೇಶಿಸಿ ಆಕೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಒಂದು ವಾರದ ನಂತರ ಈ ವಿಷಯದ ಬಗ್ಗೆ ಚರ್ಚಿಸುವಂತೆ ಮನವೊಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಗಮನಾರ್ಹವೆಂದರೆ, ವಿಪ್ರಜ್ 2026ರ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ತಂಡದ ಸದಸ್ಯರಾಗಿಯೂ ಆಯ್ಕೆಯಾಗಿದ್ದಾರೆ.
ಈ ವಿವಾದದ ನಡುವೆಯೇ, ವಿಪ್ರಜ್ ನಿಗಮ್ ಮತ್ತು ಆ ಮಹಿಳೆ ಪರಸ್ಪರರ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ. ವಿವಿಧ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿ ಗಂಭೀರ ಬೆದರಿಕೆಗಳನ್ನು ಒಡ್ಡುವುದು ಹಾಗೂ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿಗಮ್ ಈ ಹಿಂದೆ ನವೆಂಬರ್ 8, 2025 ರಂದು ಬರಾಬಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ, ಆ ಮಹಿಳೆ ಗೌತಮ್ ಬುದ್ಧ ನಗರ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯಲ್ಲಿ ನಿಗಮ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ತಮ್ಮ ದೂರಿನಲ್ಲಿ, ತಾವು ಕಳೆದ ವರ್ಷದ ಮೇ ತಿಂಗಳಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದೆವು ಎಂದು ಆ ಮಹಿಳೆ ತಿಳಿಸಿದ್ದಾರೆ. ಪರಿಚಯದ ಲಾಭ ಪಡೆದುಕೊಂಡು, ಜುಲೈ 29 ರಂದು ತನ್ನನ್ನು ನೋಯ್ಡಾಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದಾರೆ (ಅತ್ಯಾಚಾರವೆಸಗಿದ್ದಾರೆ) ಎಂದು ಆರೋಪಿಸಿ ಅವರು ಡಿಸೆಂಬರ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಅವರ ಕ್ರಿಕೆಟ್ ವೃತ್ತಿಜೀವನದ ವಿಷಯಕ್ಕೆ ಬಂದರೆ, ನಿಗಮ್ ಉತ್ತರ ಪ್ರದೇಶ ತಂಡದ ಪರ ಆಡುತ್ತಾರೆ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಐಪಿಎಲ್‌ನಲ್ಲಿ, ಅವರು ಡೆಲ್ಲಿ ಕ್ಯಾಪಿಟಲ್ಸ್ (DC) ಪರ 19 ಪಂದ್ಯಗಳನ್ನು ಆಡಿ, 36 ಸರಾಸರಿಯಲ್ಲಿ 13 ವಿಕೆಟ್ ಪಡೆದಿದ್ದಾರೆ.














