Last Updated:
Darshan: ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಪ್ರದೋಷ್ ಸೆಷನ್ಸ್ ಕೋರ್ಟ್ಗೆ ಬಂದಾಗಿದೆ. ಆದರೆ ಅತ್ತ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರೇಣುಕಾಸ್ವಾಮಿ ಕೇಸ್ಗೆ (Renukaswamy case) ಸಂಬಂಧಿಸಿ ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ (Approver Statement) ದಾಖಲು ಪ್ರಕ್ರಿಯೆ 12 ಗಂಟೆಗೆ ನಿಗದಿಯಾಗಿತ್ತು. ಪ್ರದೋಷ್ (Pradosh) ಕೋರ್ಟ್ಗೆ ಬಂದು, ಕೋರ್ಟ್ ಬಳಿ ಬಿಗಿ ಬಂದೋಬಸ್ತ್ ಕೂಡಾ ಮಾಡಲಾಗಿದೆ. ಇನ್ನೇನು ವಿಚಾರಣೆ ಶುರು ಆಗಬೇಕು ಎನ್ನುವಾಗ ದರ್ಶನ್ (Darshan) ಹೈಕೋರ್ಟ್ (High Court) ಮೊರೆ ಹೋಗಿದ್ದಾರೆ.
ಪ್ರದೋಷ್ ಮಾಫಿ ಸಾಕ್ಷಿ ಮಂದೂಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಇತ್ತ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಅತ್ತ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ಮನವಿ ಮಾಡಿದ್ದು ಮತ್ತೊಂದ್ ಕಡೆ ಸಿಟಿ ಸಿವಿಲ್ ಕೋರ್ಟ್ ಬಳಿ ಪ್ರದೋಷ್ ತಲುಪಿಯಾಗಿದೆ. ಅರ್ಧ ಗಂಟೆಯಲ್ಲಿ ಪ್ರದೋಷ್ನ ಕೋರ್ಟ್ ಮುಂದೆ ಹಾಜರುಪಡಿಸಲಿರುವ ಅಧಿಕಾರಿಗಳು, ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು.
ಈ ವೇಳೆ ದರ್ಶನ್ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿದ ಬಗ್ಗೆ ಕೋರ್ಟ್ ಗೆ ಮಾಹಿತಿ ಲಭ್ಯವಾಗಿದೆ. ಸಿಸಿಹೆಚ್ ಕೋರ್ಟ್ ಗೆ ದರ್ಶನ್ ಪರ ವಕೀಲರು ಮಾಹಿತಿ ನೀಡಿದ್ದಾರೆ. ಪ್ರದೂಶ್ ಹೇಳಿಕೆ ಮುಂದೂಡುವಂತೆ ಮನವಿ ಮಾಡಿದ್ದಾರೆ.
ವರದಿ: ಗಂಗಾಧರ ವಾಗಟ, ನ್ಯೂಸ್18 ಕನ್ನಡ ಪ್ರತಿನಿಧಿ ಬೆಂಗಳೂರು














