Last Updated:
ಕೆನರಾ ಬ್ಯಾಂಕ್ 3500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 581 ಹುದ್ದೆಗಳು ಲಭ್ಯ. ಪದವೀಧರರು ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲ, ಅಂಕಗಳ ಆಧಾರದ ಮೇಲೆ ಆಯ್ಕೆ.
ಬೆಂಗಳೂರು: ಬ್ಯಾಂಕಿಂಗ್ (Banking) ಕ್ಷೇತ್ರದಲ್ಲಿ ಉಜ್ವಲ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ನಿರುದ್ಯೋಗಿ ಪದವೀಧರರಿಗೆ ಪ್ರಸಿದ್ಧ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಸುವರ್ಣಾವಕಾಶವನ್ನು ನೀಡಿದೆ. ಭಾರತದಾದ್ಯಂತ ಒಟ್ಟು 3500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ (Jobs) ಭರ್ತಿಗೆ ಆನ್ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವೆಂದರೆ, ಕರ್ನಾಟಕದಲ್ಲೇ ಬರೋಬ್ಬರಿ 581 ಹುದ್ದೆಗಳು ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ 12ನೇ ತರಗತಿ ಅಥವಾ ಡಿಪ್ಲೊಮಾದಲ್ಲಿ ಕನಿಷ್ಠ 60% ಅಂಕಗಳನ್ನು (SC/ST/PWD ಅಭ್ಯರ್ಥಿಗಳಿಗೆ 55%) ಪಡೆದಿರುವುದು ಕಡ್ಡಾಯ.
ವಯೋಮಿತಿ: 01.09.2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷಗಳ ಒಳಗಿರಬೇಕು (ಸರ್ಕಾರಿ ನಿಯಮದಂತೆ ವಯೋಮಿತಿ ಸಡಿಲಿಕೆ ಅನ್ವಯ).
ಮಾಸಿಕ ಸ್ಟೈಫಂಡ್: ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ರೂ. 16,650 ಸ್ಟೈಫಂಡ್ ದೊರೆಯಲಿದೆ (ಬ್ಯಾಂಕ್ ವತಿಯಿಂದ 10,500 ರೂ. ಹಾಗೂ ಕೇಂದ್ರ ಸರ್ಕಾರದ ನೇರ ನಗದು ವರ್ಗಾವಣೆ ಮೂಲಕ 6,150 ರೂ.).
SC, ST ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ (ಶೂನ್ಯ). ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 500 ಶುಲ್ಕವಿರುತ್ತದೆ.
ಮೊದಲು ಕೇಂದ್ರ ಸರ್ಕಾರದ ಅಪ್ರೆಂಟಿಸ್ಶಿಪ್ ಪೋರ್ಟಲ್ನಲ್ಲಿ ನೋಂದಣಿ ಮಾಡಿ, ಬಳಿಕ ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ನೌಕರಿಯ ಅನುಭವ ಹಾಗೂ ತರಬೇತಿ ಪಡೆಯಲು ಇದೊಂದು ಅಪರೂಪದ ಅವಕಾಶ.














