Darshan: ದರ್ಶನ್‌ ಕೇಸ್‌ನಲ್ಲಿ ಹೇಳಿಕೆ ಕೊಟ್ಟ ಪ್ರದೋಷ್! ರೇಣುಕಾಸ್ವಾಮಿ ಕೇಸ್‌ನಲ್ಲಿ ಸಿಗುತ್ತಾ ಬಿಗ್ ಟ್ವಿಸ್ಟ್? | | ACTPnews

News18


Last Updated:

ರೇಣುಕಾಸ್ವಾಮಿ ಕೊ* ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ಮಾಫಿ ಸಾಕ್ಷಿಯಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಸತತ ನಾಲ್ಕು ದಿನಗಳ ಕಾಲ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆದಿದ್ದು, ಇಂದು ಅದು ಪೂರ್ಣಗೊಂಡಿದೆ.

News18
News18

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ (Renukaswamy Case) ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿಯಾಗಿದ್ದ ಪ್ರದೋಷ್ (Pradosh) ಇದೀಗ ಮಾಫಿ ಸಾಕ್ಷಿಯಾಗಿದ್ದು, 59ನೇ ಸಿಸಿಹೆಚ್ ಕೋರ್ಟ್ ಮುಂದೆ ನೀಡುತ್ತಿದ್ದ ಹೇಳಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ನಾಲ್ಕು ದಿನಗಳ ಕಾಲ ನಡೆದ ಈ ಮಹತ್ವದ ಹೇಳಿಕೆ ಪ್ರಕ್ರಿಯೆ ಇಂದು ಅಂತ್ಯಗೊಂಡಿದ್ದು, ಪ್ರಕರಣದ ಮುಂದಿನ ಹಂತದತ್ತ ವಿಚಾರಣೆ ಸಾಗಲಿದೆ.

ರೇಣುಕಾಸ್ವಾಮಿ ಕೊ* ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ಮಾಫಿ ಸಾಕ್ಷಿಯಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಸತತ ನಾಲ್ಕು ದಿನಗಳ ಕಾಲ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆದಿದ್ದು, ಇಂದು ಅದು ಪೂರ್ಣಗೊಂಡಿದೆ.

ನಾಳೆ ಡಾಕ್ಯುಮೆಂಟ್ ಮಾರ್ಕಿಂಗ್

ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ನಾಳೆಯಿಂದ ಪ್ರಕರಣದಲ್ಲಿ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ.

59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆಯುತ್ತಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗಿ ನೀಡಿರುವ ಹೇಳಿಕೆಗಳು ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಪ್ರಮುಖ ಅಂಶವಾಗುವ ಸಾಧ್ಯತೆ ಇದೆ. ಇದೀಗ ನಾಲ್ಕು ದಿನಗಳ ಹೇಳಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಗಮನ ನೆಟ್ಟಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed