Karnataka
oi-Malathesha M
ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ತೋಡಿದ ಖೆಡ್ಡಾಗಿ ಬಿದ್ದಂತೆ ಕಾಣುತ್ತಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ರಿಸಲ್ಟ್ ಕೂಡ ಬಂದಾಗಿದೆ. ಅಲ್ಲದೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದೆ. ಇಷ್ಟಾದ್ರೂ ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ, ಹೀಗೆ ಆಂತರಿಕ ಕಿತ್ತಾಟದ ಬೇಗುದಿಯಲ್ಲಿ ಬೆಂದು ಹೋಗಿರುವ ಕಮಲ ಪಡೆಯನ್ನ ಕಾಂಗ್ರೆಸ್ ಪದೇ ಪದೆ ಕೆಣಕುತ್ತಿದೆ.
ವಿರೋಧ ಪಕ್ಷದ ನಾಯಕ ಇಲ್ಲದೆ ಇಂದಿನಿಂದ ವಿಧಾನಸಭೆ ಅಧಿವೇಶನ ಶುರುವಾಗುತ್ತಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರ ಹಿಡಿದು ಬಿಜೆಪಿ ವಿರುದ್ಧ ತಿರುಗೇಟು ನೀಡುತ್ತಿದ್ದಾರೆ. ಹೀಗೆ ‘ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, dear @BJP4Karnataka, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!’ ಎಂದು ಕಾಂಗ್ರೆಸ್ ಬಿಜೆಪಿ ನಾಯಕರನ್ನ ಕೆಣಕಿದೆ. ಅಲ್ಲದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡುತ್ತಿದೆ.
‘ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇಲ್ವಾ?’
ಇನ್ನು ಮತ್ತೊಂದು ಟ್ವೀಟ್ ಮೂಲಕ, ‘ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. @BJP4Karnataka ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ.’ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು.
ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು.@BJP4Karnataka ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ…
— Karnataka Congress (@INCKarnataka) July 3, 2023
‘ವಿಪಕ್ಷ ನಾಯಕನ ‘ಗ್ಯಾರಂಟಿ’ ಇಲ್ಲ!’
ಇಷ್ಟುದಿನ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಮಾಡುತ್ತಿದ್ದ ಆರೋಪಗಳಿಗೆಲ್ಲ ಕಾಂಗ್ರೆಸ್ ಈಗ ತಿರುಗೇಟು ನೀಡುತ್ತಿದೆ. ಅದರಲ್ಲೂ ವಿಪಕ್ಷ ನಾಯಕನ ಆಯ್ಕೆಯ ಕುರಿತು ಉಂಟಾಗಿರುವ ಗೊಂದಲ ಬಗ್ಗೆ, ‘ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ’ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ.’ ಎಂದಿದೆ ಕಾಂಗ್ರೆಸ್.
ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ!
ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ.
ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ.
— Karnataka Congress (@INCKarnataka) July 3, 2023
ವಿಪಕ್ಷ ನಾಯಕನ ಹುದ್ದೆ ಮಾರಾಟ ಆರೋಪ!
ಇಷ್ಟೆಲ್ಲದರ ನಡುವೆ ಇನ್ನೊಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್, ‘ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು, ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? @BJP4Karnataka ಉತ್ತರಿಸಬೇಕು.’ ಎಂದು ಕಮಲ ಪಡೆಯನ್ನ ಕೆಣಕಿದೆ.
ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?
ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು,
ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ?ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ?@BJP4Karnataka ಉತ್ತರಿಸಬೇಕು.
— Karnataka Congress (@INCKarnataka) July 3, 2023
ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ!
ಇನ್ನೊಂದ್ಕಡೆ ಸದನ ಆರಂಭವಾಗುವ ಮೊದಲೇ ವಿಪಕ್ಷ ನಾಯಕನ ಆಯ್ಕೆ ಪಕ್ಕಾ ಎಂದು ರಾಜ್ಯ ಬಿಜೆಪಿ ಘಟಕ ಭರವಸೆ ನೀಡಿ ಟ್ವೀಟ್ ಮಾಡಿತ್ತು, ಈಗ ನೋಡಿದ್ರೆ ವಿಪಕ್ಷ ನಾಯಕ ಆಯ್ಕೆ ಆಗಿಲ್ಲ. ಹೀಗಾಗಿ ಅದೇ ಟ್ವೀಟ್ ಬಗ್ಗೆ ತಿರುಗೇಟು ನೀಡಿರುವ ಕಾಂಗ್ರೆಸ್, ‘ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ!’ ಎಂದಿದೆ.
Dear @BJP4Karnataka ,
ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ.
ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ.
ಪಾಪ! pic.twitter.com/YW4RqHPJD2
— Karnataka Congress (@INCKarnataka) July 3, 2023
ಒಟ್ನಲ್ಲಿ ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಅನ್ನೋ ಹಾಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಫೈಟ್ ಮುಂದುವರಿದಿದೆ. ಅದ್ರಲ್ಲೂ ಟ್ವೀಟ್ ವಾರ್ ಬಲು ಜೋರಾಗುತ್ತಿದ್ದು, ಆ ಕಡೆ ಬಿಜೆಪಿ ಮಾಡುವ ಟ್ವೀಟ್ಗೆ ಕಾಂಗ್ರೆಸ್ ಉತ್ತರ ಕೊಡುತ್ತಿದೆ, ಇತ್ತ ಕಾಂಗ್ರೆಸ್ ಮಾಡುವ ಟ್ವೀಟ್ಗೆ ಬಿಜೆಪಿ ಉತ್ತರ ಕೊಡುತ್ತಿದೆ. ಇಷ್ಟೆಲ್ಲದರ ನಡುವೆ ಇವರಿಬ್ಬರ ಈ ಟ್ವೀಟ್ ವಾರ್ ಸೋಷಿಯಲ್ ಮೀಡಿಯಾ ಮಂದಿಯನ್ನೂ ಎಂಟರ್ಟೈನ್ ಮಾಡುತ್ತಿದೆ.
English summary
Congress challenged BJP over Opposition leader selection in Karnataka.
Story first published: Monday, July 3, 2023, 15:12 [IST]