Bengaluru Rain: ಬೆಳಗ್ಗೆಯೇ ಬೆಂಗಳೂರು, ಕೋಲಾರದಲ್ಲಿ ಮಳೆ ಅಬ್ಬರ : ಭಾರಿ ಮಳೆ ಮುನ್ಸೂಚನೆ | Bengaluru Rain: Rain Begins with Thunder in Bengaluru and Kolar

Karnataka

oi-Naveen Kumar N

|

Google Oneindia Kannada News

ಮಂಗಳವಾರ ಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಶುರವಾಗಿದೆ. ನಗರದ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು, ನಂತರ ಜಿಟಿ ಜಿಟಿ ಮಳೆ ಶುರುವಾಯಿತು, ಬಳಿಕ ಮಳೆ ಬಿರುಸು ಪಡೆದುಕೊಂಡಿದ್ದು, ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಗುಡುಗು, ಮಿಂಚು ಜೊತೆ ವೇಗವಾದ ಗಾಳಿ ಬೀಸುತ್ತಿದೆ.

ಬೆಂಗಳೂರಿನ ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ರಾಜರಾಜೇಶ್ವರಿ ನಗರ, ಯಶವಂತಪುರ, ಲಾಲ್ ಬಾಗ್, ವಿಧಾನಸೌಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

IMD Predicts Heavy Rain

ಉತ್ತಮ ಮಳೆಯಿಂದಾಗಿ ಹಲವು ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದರು. ಮುಂಜಾನೆಯಿಂದಲೂ ಬೆಂಗಳೂರು ವಾತಾವರಣ ಫುಲ್ ಕೂಲಾಗಿದ್ದು, ಮಳೆಯಿಂದ ಕೆಲಸಕ್ಕೆ ತೆರಳುವವರಿಗೆ ಸಮಸ್ಯೆಯಾಗಿದೆ. ಆದರೂ, ಇಷ್ಟು ದಿನ ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ಜನತೆ ಮಳೆಯಿಂದಾಗಿ ಫುಲ್ ಖುಷ್ ಆಗಿದ್ದಾರೆ.

Monsoon Active in Benglauru: ಸೋಮವಾರ ಹಗುರ ಮಳೆ ದಾಖಲು, ಜೂನ್ 23ರವರೆಗೆ ಮಳೆ ಆಗಮನ Monsoon Active in Benglauru: ಸೋಮವಾರ ಹಗುರ ಮಳೆ ದಾಖಲು, ಜೂನ್ 23ರವರೆಗೆ ಮಳೆ ಆಗಮನ

ಇನ್ನು ಬೆಂಗಳೂರು ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಬೀಳುತ್ತಿದೆ ಮಂಗಳವಾರ ಬೆಳಗ್ಗೆ ಕೂಡ ಹಲವು ಕಡೆಗಳಲ್ಲಿ ಉತ್ತಮ ಮಳೆ ಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

ಇನ್ನೂ ಎರಡು ದಿನ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರದಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಮಂಗಳವಾರ ಕೂಡ ಇದೇ ಪರಿಸ್ಥಿತಿ ಇದ್ದು, ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆಯಾಗಿದೆ.

IMD Predicts Heavy Rain

ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಕೊಡಗು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಬೆಳಗಾವಿ, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

English summary

Rain Begins with Thunder in Bengaluru and Kolar; IMD Predicts Heavy Rain in Many Districts of Karnataka for the Next 48 Hours.

Story first published: Tuesday, June 20, 2023, 10:27 [IST]

Source link