Last Updated:
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಸಮಯ ಕೋರಿದ್ದರು.
ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (Cockroach Janata Party) ಬೆನ್ನಲ್ಲೇ ವಿಪಕ್ಷಗಳು ಕೂಡ ಹೋರಾಟಕ್ಕಿಳಿದಿವೆ. ಎಸ್ಐಆರ್ (SIR) ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಮುಂದಾಗಿದೆ. ಆದ್ರೆ, ಪ್ರತಿಭಟನೆ ಶುರುವಾಗುವ ಮುನ್ನವೇ ವಿಪಕ್ಷಗಳಿಗೆ ಹಿನ್ನೆಡೆಯಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಸಮಯ ಕೋರಿದ್ದರು. ಆದರೆ, ಸಿಜೆಐ ಅವರು ಈ ಮನವಿಯನ್ನು ಅಧಿಕೃತವಾಗಿ ತಿರಸ್ಕರಿಸಿದ್ದು, ಈ ಕುರಿತು ಇಮೇಲ್ ಮೂಲಕ ಸ್ಪಷ್ಟನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ವಿಪಕ್ಷಗಳ ಬೇಡಿಕೆಗಳೇನು?
- SIR ಪ್ರಕ್ರಿಯೆಗೆ ತಕ್ಷಣದ ತಡೆ ನೀಡಬೇಕು.
- ದೇಶಾದ್ಯಂತ ಮತಗಳ್ಳತನ ನಿಲ್ಲಬೇಕು.
- ಚುನಾವಣಾ ಆಯೋಗ ಅಥವಾ ಸಂಬಂಧಿತ ಜವಾಬ್ದಾರಿಯಿಂದ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು.














