Rain alert: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ | Holiday declared for schools and colleges in Dakshina Kannada, Udupi districts

Karnataka

oi-Mamatha M

|

Google Oneindia Kannada News

ದಕ್ಷಿಣ ಕನ್ನಡ, ಜುಲೈ. 05: ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಧಿಕಾರಿಗಳು ಗುರುವಾರವೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಗುರುವಾರ (ಜುಲೈ .6 )ಮುಚ್ಚಲ್ಪಡುತ್ತವೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಆಗಿರುವ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Holiday declared for schools and colleges

ಪೋಷಕರು ತಮ್ಮ ಮಕ್ಕಳೊಂದಿಗೆ ಜಾಗರೂಕರಾಗಿರಬೇಕು. ತಗ್ಗು ಪ್ರದೇಶಗಳಿಗೆ, ಕೆರೆ, ನದಿ, ಕಡಲತೀರ ಅಥವಾ ನೀರಿರುವ ಯಾವುದೇ ಸ್ಥಳಕ್ಕೆ ಹೋಗಲು ಬಿಡಬಾರದು ಎಂದು ಸೂಚಿಸಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪರಿಸ್ಥಿತಿ ಅವಶ್ಯವಿದ್ದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಮತ್ತು ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ತಿಳಿಸಲಾಗಿದೆ.

ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್, ಜುಲೈ 8ರವರೆಗೆ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್, ಜುಲೈ 8ರವರೆಗೆ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 8ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.

“ಸಕ್ರಿಯ ಮುಂಗಾರು ಪರಿಸ್ಥಿತಿಗಳು ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಅದರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ಹೇಳಿದೆ.

English summary

Rain alert: Dakshina Kannada and Udupi district authorities announced holiday for schools and college on Thursday in view of the orange alert. know more.

Story first published: Wednesday, July 5, 2023, 23:50 [IST]

Source link