Jobs
oi-Gururaj S

ಬೆಂಗಳೂರು, ಜುಲೈ 07; ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ಜೂನ್ 13ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜುಲೈ 13ರ ಬೆಳಗ್ಗೆ 11 ಗಂಟೆಗೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಂಗಳೂರು; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಹಾಕಿ

ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗದಲ್ಲಿನ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಶ್ರೀನಿಧಿ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ
ಅದೇ ರೀತಿ ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ, ಜಾನುವಾರು ಸಾಗಾಣಿಕೆ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿ ಶಾಸ್ತ್ರ), ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರ ವಿಭಾಗದಲ್ಲಿ (ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ ಸೂಕ್ಷ್ಮಜೀವಾಣು ಶಾಸ್ತ್ರ/ ಪರೋಪಜೀವಿ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ; ಅರ್ಜಿ ಶುಲ್ಕ ಕಡಿತ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ www.kvafsu.edu.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08182-200872.
ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಹಾಕಿ; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ ನೀಟ್ನಲ್ಲಿ ಆಯ್ಕೆಯಾಗುವ ಎಂಬಿಬಿಎಸ್, ಬಿಡಿಎಸ್, ಬಿಆಯುಷ್, ಬಿಇ, ಬಿಇ ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಬಳಿಕ ಮೂಲ ಇನ್ಡೆಂನಿಟಿ ಬಾಂಡ್ ಅನ್ನು ನಿಗಮದ ಜಿಲ್ಲಾ ಕಚೇರಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08539-225008ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
English summary
Walk in interview on June 13th for the assistant professor post at Shivamogga veterinary college. Candidates can attend interview from morning 11 am.