India
oi-Naveen Kumar N

ಅನ್ನಭಾಗ್ಯ ಯೋಜನೆಗಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿ ಪೂರೈಕೆ ಮಾಡದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಕ್ಕಿ ಪೂರೈಕೆ ಮಾಡಲು ಕೇಂದ್ರ ಅಡ್ಡಗಾಲು ಹಾಕಿದ್ದು, ಬಡವರ ಯೋಜನೆಗಳ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ, ಜೂನ್ 20 ರಾಜ್ಯಾದ್ಯಂತ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ ಕೂಡ ನಡೆಸಲಾಗಿತ್ತು.
ಇನ್ನು ರಾಜ್ಯಕ್ಕೆ ಹೆಚ್ಚುವರಿ ಪೂರೈಕೆ ಮಾಡಲು ಯಾಕೆ ಸಾಧ್ಯವಿಲ್ಲ ಎಂದು ಕೇಂದ್ರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ. ಮುಕ್ತ ಮಾರುಕಟ್ಟಯಲ್ಲಿ ಧಾನ್ಯಗಳ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಮತ್ತು ಕೈಗೆಟುಕುವ ದರದಲ್ಲಿ ಇರುವಂತೆ ಮಾಡಲು, ಕೇಂದ್ರ ಸರ್ಕಾರ ತನ್ನ ದಾಸ್ತಾನುಗಳಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ಹೇಳಿದ್ದಾರೆ.

ಅಕ್ಕಿ ಪೂರೈಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರಶ್ನೆ ಮಾಡಿದಾಗ ಈ ಉತ್ತರ ನೀಡಿದ್ದು, ದೇಶದ 140 ಕೋಟಿ ಜನರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಡಲು ಕಾಯದರ್ಶಿಗಳ ಸಮಿತಿಯನ್ನು ರಚನೆ ಮಾಡಿದೆ. ರಾಜ್ಯಗಳು ಅಗತ್ಯಬಿದ್ದರೆ ಮಾರುಕಟ್ಟೆಯಿಂದ ಮುಕ್ತ ಮಾರುಕಟ್ಟೆಯಿಂದ ಖರೀದಿ ಮಾಡಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದರು.
ಕೇಂದ್ರದ ವಿರುದ್ಧ ಕರ್ನಾಟಕದಲ್ಲಿ ಪ್ರತಿಭಟನೆ
ಕರ್ನಾಟಕ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡದೇ ಇರುವುದು ಕಾಂಗ್ರೆಸ್ ನಾಯಕರ ಕೋಪಕ್ಕೆ ಕಾರಣವಾಗಿದೆ. ಜೂನ್ 20ರಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಡವರಿಗೆ ಅಕ್ಕಿ ಕೊಡಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೂಡ ಪ್ರತಿಭಟನೆ ಮಾಡಿದ್ದರು. ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಅದಕ್ಕಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ 10 ಕೆ.ಜಿ. ಅಕ್ಕಿ ಕೊಡಬೇಕು ಎಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿತ್ತು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಬಂಧಿಸಲಾಯಿತು.
ಹಲವು ರಾಜ್ಯಗಳಿಂದ ಅಕ್ಕಿ ಪೂರೈಕೆಗೆ ಬೇಡಿಕೆ
ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ, ಸೆಂಟ್ರಲ್ ವೇರ್‌ಹೌಸಿಂಗ್ ಕಾರ್ಪೊರೇಷನ್ ಮತ್ತು ನಾಫೆಡ್‌ನಂತಹ ಕೇಂದ್ರೀಯ ಸಂಸ್ಥೆಗಳಿಂದ ಖರೀದಿಸಲು ಸಿದ್ಧ ಎಂದು ಕರ್ನಾಟಕ ಹೇಳಿದ್ದರೂ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದೆ. ಇತ್ತೀಚೆಗೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (OMSS) ಅಡಿಯಲ್ಲಿ ಕೇಂದ್ರದಿಂದ ಅಕ್ಕಿ ಮತ್ತು ಗೋಧಿ ಮಾರಾಟವನ್ನು ನಿಲ್ಲಿಸಿದೆ.
“ನಾನು ಉತ್ತರ ಪ್ರದೇಶ, ಮಧ್ಯಪ್ರದೇಶ, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಅಕ್ಕಿಗೆ ಬೇಡಿಕೆಗಳನ್ನು ಸ್ವೀಕರಿಸಿದ್ದೇನೆ. ವಿವಿಧ ರಾಜ್ಯಗಳು ದೊಡ್ಡ ಪ್ರಮಾಣದಲ್ಲಿ ಅಕ್ಕಿಗೆ ಬೇಡಿಕೆ ಇಡುತ್ತವೆ. ಆದರೆ ನಾವು ಎಲ್ಲರಿಗೂ ಅಕ್ಕಿ ನೀಡಲು ನಿರಾಕರಿಸಿದ್ದೇವೆ” ಎಂದು ಗೋಯಲ್ ಹೇಳಿದರು.
“ಸರ್ಕಾರದ ಬಳಿ ಇರುವ ಅಕ್ಕಿ ದಾಸ್ತಾನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ದೇಶದ ಯಾವುದೇ ಭಾಗದಲ್ಲಿ ಅಕ್ಕಿ ಬೆಲೆ ಏರಿಕೆಯಾಗುವುದಿಲ್ಲ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ದೇಶದ 140 ಕೋಟಿ ಜನರೂ ಅಕ್ಕಿ ಖರೀದಿಸಬೇಕಾಗಿದೆ” ಎಂದು ಹೇಳಿದರು.
ಗೋಧಿ ಮತ್ತು ಅಕ್ಕಿಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ತಡೆಯಲು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (OMSS) ಅಡಿಯಲ್ಲಿ ಕೇಂದ್ರವು ತನ್ನ ದಾಸ್ತಾನುಗಳಿಂದ ಹೆಚ್ಚುವರಿ ಧಾನ್ಯಗಳನ್ನು ಬಿಡುಗಡೆ ಮಾಡುತ್ತದೆ.
English summary
The Centre has refused to provide rice to several states from its stocks to ensure that the price of the grain does not increase in the open market and people continue to get it at affordable rates, Union Minister Piyush Goyal said on Tuesday, amid a political row over the refusal of rice supply to Karnataka.
Story first published: Wednesday, June 21, 2023, 11:30 [IST]