ಧೋನಿ ನಾಯಕತ್ವದಲ್ಲಿ ಭಾರತ ತಂಡವು 3 ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. 2007ರಲ್ಲಿ ಟಿ20 ವಿಶ್ವಕಪ್, 2011ರಲ್ಲಿ ಏಕದಿನ ವಿಶ್ವಕಪ್ ಮತ್ತು 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಾಗ ಭಾರತ ತಂಡವನ್ನು ಮುನ್ನಡೆಸಿದ್ದರು. ಇದಲ್ಲದೆ, ಅವರು ತಮ್ಮ ನಾಯಕತ್ವದಲ್ಲಿ ಟೀಮ್ ಇಂಡಿಯಾವನ್ನು ನಂಬರ್ 1 ಸ್ಥಾನಕ್ಕೇರಿಸಿದ್ದರು.