Rashmika Mandanna: ಏಕಾಏಕಿ ಬಂದು ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್! ವಿಡಿಯೋ ವೈರಲ್, ಸಿನಿ ಪ್ರಿಯರ ಆಕ್ರೋಶ | | ACTPnews

ರಶ್ಮಿಕಾ ಮಂದಣ್ಣ


Last Updated:

ಜೂನ್ 19ರಂದು ಬಿಡುಗಡೆಯಾಗಲಿರುವ ‘ಕಾಕ್‌ಟೇಲ್ 2’ ಚಿತ್ರದ ಪ್ರಚಾರಕ್ಕಾಗಿ ಚಿತ್ರದ ಪ್ರಮುಖ ತಾರಾಬಳಗ ಪುಣೆಯ ಜನಪ್ರಿಯ ಮಾಲ್‌ಗೆ ಭೇಟಿ ನೀಡಿತ್ತು. ಈ ವಿಷಯ ತಿಳಿದ ತಕ್ಷಣ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ನೋಡಲು ಸ್ಥಳಕ್ಕೆ ಧಾವಿಸಿದ್ದರು.

ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ‘ಕಾಕ್‌ಟೇಲ್ 2’ (Cocktail 2) ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿತ್ರದ ರಿಲೀಸ್ ಡೇಟ್ ಹತ್ತಿರವಾಗುತ್ತಿದ್ದಂತೆ ನಟರಾದ ಶಾಹಿದ್ ಕಪೂರ್, ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ದೇಶದ ವಿವಿಧ ಭಾಗಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಇತ್ತೀಚೆಗೆ ಪುಣೆಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾರೀ ಗದ್ದಲಕ್ಕೆ ಉಂಟಾಗಿದೆ.

ಜೂನ್ 19ರಂದು ಬಿಡುಗಡೆಯಾಗಲಿರುವ ‘ಕಾಕ್‌ಟೇಲ್ 2’ ಚಿತ್ರದ ಪ್ರಚಾರಕ್ಕಾಗಿ ಚಿತ್ರದ ಪ್ರಮುಖ ತಾರಾಬಳಗ ಪುಣೆಯ ಜನಪ್ರಿಯ ಮಾಲ್‌ಗೆ ಭೇಟಿ ನೀಡಿತ್ತು. ಈ ವಿಷಯ ತಿಳಿದ ತಕ್ಷಣ ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ನೋಡಲು ಸ್ಥಳಕ್ಕೆ ಧಾವಿಸಿದ್ದರು.

ಕೆಲವೇ ಕ್ಷಣಗಳಲ್ಲಿ ಜನಸಂದಣಿ ನಿಯಂತ್ರಣ ಮೀರಿ ಹೋಗಿತು. ತಾರೆಯರನ್ನು ಹತ್ತಿರದಿಂದ ನೋಡಬೇಕು, ಅವರೊಂದಿಗೆ ಫೋಟೋ ತೆಗೆಸಿಕೊಳ್ಳಬೇಕು ಎಂಬ ಉತ್ಸಾಹದಲ್ಲಿ ಅನೇಕರು ಮುಂದೆ ನುಗ್ಗಲು ಪ್ರಯತ್ನಿಸಿದ್ದಾರೆ.

ಅಂತಹ ಸಂದರ್ಭದಲ್ಲಿ ಕೃತಿ ಸನೋನ್ ತೋರಿದ ಧೈರ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋದಲ್ಲಿ ಕೃತಿ, ರಶ್ಮಿಕಾಳ ಕೈಯನ್ನು ಬಿಗಿಯಾಗಿ ಹಿಡಿದುಕೊಂಡು ಜನಸಂದಣಿಯಿಂದ ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಹೋಗುತ್ತಿರುವುದು ಕಾಣಿಸುತ್ತದೆ.

ಆಕ್ರೋಶಗೊಂಡ ಶಾಹಿದ್ ಕಪೂರ್

ವೈರಲ್ ವಿಡಿಯೋಗಳಲ್ಲಿ ಶಾಹಿದ್ ಅವರ ಬಟ್ಟೆಯನ್ನು ಕೆಲವರು ಎಳೆಯಲು ಯತ್ನಿಸಿರುವ ದೃಶ್ಯಗಳು ಕಾಣಿಸಿಕೊಂಡಿವೆ. ಇದರಿಂದ ಅಸಮಾಧಾನಗೊಂಡ ಶಾಹಿದ್ ಜನರನ್ನು ದೂರ ಸರಿಸುತ್ತಾ ಮುಂದೆ ಸಾಗುವ ಪ್ರಯತ್ನ ಮಾಡಿದ್ದಾರೆ.

ಇನ್ನು ಶಾಹಿದ್ ಕಪೂರ್, ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಸಾಮಾಜಿಕ ಜಾಲತಾಣಗಳು, ಸಿನಿ ವಲಯಗಳು ಹಾಗೂ ಅಭಿಮಾನಿಗಳ ನಡುವೆ ಚಿತ್ರದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

ಈ ಮೂವರ ಕಾಂಬಿನೇಷನ್ ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದ್ದು, ಚಿತ್ರದಲ್ಲಿ ಅವರ ಪಾತ್ರಗಳು ಹೇಗಿರಲಿವೆ ಎಂಬ ಚರ್ಚೆ ಜೋರಾಗಿದೆ. ವಿಶೇಷವಾಗಿ ರಶ್ಮಿಕಾ ಮಂದಣ್ಣ ಅವರ ಬಾಲಿವುಡ್ ಪಯಣದಲ್ಲಿ ಈ ಸಿನಿಮಾ ಮತ್ತೊಂದು ಮಹತ್ವದ ಹೆಜ್ಜೆಯಾಗಲಿದೆ ಎನ್ನಲಾಗುತ್ತಿದೆ.

‘ಕಾಕ್ಟೇಲ್ 2’ ಚಿತ್ರದ ಬಗ್ಗೆ ಕುತೂಹಲ ಹೆಚ್ಚಲು ಮತ್ತೊಂದು ಪ್ರಮುಖ ಕಾರಣ ಅದರ ಮೊದಲ ಭಾಗದ ಯಶಸ್ಸು. 2012ರಲ್ಲಿ ಬಿಡುಗಡೆಯಾದ ‘ಕಾಕ್ಟೇಲ್’ ಸಿನಿಮಾ ಆ ಕಾಲದ ಅತ್ಯಂತ ಜನಪ್ರಿಯ ರೊಮ್ಯಾಂಟಿಕ್ ಕಾಮಿಡಿ-ಡ್ರಾಮಾ ಚಿತ್ರಗಳಲ್ಲಿ ಒಂದಾಗಿತ್ತು. ಆ ಚಿತ್ರದಲ್ಲಿ ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ ಮತ್ತು ಡಯಾನಾ ಪೆಂಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports