Karnataka Rain: ಉತ್ತರ ಕರ್ನಾಟಕದಲ್ಲೂ ಮುಂಗಾರು ಚುರುಕು: ತುಮಕೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ | Karnataka Rain: IMD Issues Thunderstorm Warning for Coastal Karnataka as Monsoon Active

Karnataka

oi-Naveen Kumar N

|

Google Oneindia Kannada News

ಬಿಪರ್ ಜಾಯ್ ಚಂಡಮಾರುತದ ಕಾರಣದಿಂದ ದುರ್ಬಲವಾಗಿದ್ದ ಮುಂಗಾರು ಚುರುಕುಗೊಳ್ಳುತ್ತಿದೆ. ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿ, ಮಲೆನಾಡು, ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಈಗ ಉತ್ತರ ಒಳನಾಡಿನಲ್ಲೂ ಮುಂಗಾರು ಚುರುಕಾಗುವ ಮುನ್ಸೂಚನೆ ಸಿಕ್ಕಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದ್ದು, ಜೂನ್ 23 ಮತ್ತು 24 ರಂದು ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.

Karnataka Rain

ಜೂನ್ 26ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಗಾಳಿ, ಗುಡುಗು, ಮಿಂಚಿನೊಂದಿಗೆ ಮಳೆ ಸುರಿಯಲಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಇನ್ನು ಪ್ರವಾಸಿಗರು, ಸ್ಥಳೀಯರಿಗೂ ಸಮುದ್ರದ ತೀರಕ್ಕೆ ಹೋಗದಂತೆ ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 23, 24ರಂದು ಉತ್ತಮ ಮಳೆಯಾಗಲಿದ್ದು, ಜೂನ್ 25, 26ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ ಎಂದು ತಿಳಿಸಿದೆ.

Bengaluru Rains: ಬುಧವಾರವು ಬಿದ್ದ ಜಿಟಿ ಜಟಿ ಮಳೆ, ಮುನ್ಸೂಚನೆ ಏನಿದೆ? ನೋಡಿBengaluru Rains: ಬುಧವಾರವು ಬಿದ್ದ ಜಿಟಿ ಜಟಿ ಮಳೆ, ಮುನ್ಸೂಚನೆ ಏನಿದೆ? ನೋಡಿ

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಎರಡು ದಿನ ವ್ಯಾಪಕ ಮಳೆಯಾಗಲಿದೆ. ಇಂದು (ಗುರುವಾರ) ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳುವ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಕೂಡ ಉತ್ತಮ ಮಳೆ ಮುಂದುವರಿಕೆ

ಇನ್ನು ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದ್ದು, ಜೂನ್ 26ರವರೆಗೆ ಉತ್ತಮ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.

ತುಮಕೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ

ತುಮಕೂರು, ಮಂಡ್ಯ, ಹಾಸನ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುರುವಾರದಿಂದ, ಶನಿವಾರದವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶಿವಮೊಗ್ಗದಲ್ಲಿ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬೆಂಗಳೂರಿನಲ್ಲಿ ಗುರುವಾರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವಣರ ಇದ್ದರೆ, ಗುರುವಾರ ಬಿಸಿಲು ಕಾಣಿಸಿಕೊಂಡಿದೆ.

English summary

The India Meteorological Department (IMD) has issued a thunderstorm warning for coastal parts of Karnataka. Additionally, a ‘watch’ warning has been given for southern Karnataka in the upcoming days of the week, coinciding with the onset of the monsoon season.

Story first published: Thursday, June 22, 2023, 8:06 [IST]

Source link