IND vs PAK, T20I WC: ಮಂಧಾನ ಅಬ್ಬರ, ದೀಪ್ತಿ ಶರ್ಮಾ ಸ್ಪಿನ್ ಮ್ಯಾಜಿಕ್! ಪಾಕಿಸ್ತಾನ ವಿರುದ್ಧ ಭಾರೀ ಅಂತರದಿಂದ ಗೆದ್ದ ಭಾರತ | ಕ್ರೀಡಾ ಸುದ್ದಿ | ACTPnews

ಪಾಕಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ


Last Updated:

ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 170 ರನ್​ಗಳ ಸವಾಲಿನ ಮೊತ್ತ ಕಲೆ ಹಾಕಿತು. 171 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 17 ಓವರ್​ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 106ಕ್ಕೆ ಆಲೌಟ್ ಆಯಿತು.

ಪಾಕಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ
ಪಾಕಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ

ಎಡ್ಜ್ ಬಾಸ್ಟನ್​​ನಲ್ಲಿ ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ 2026ರ 6ನೇ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 64 ರನ್​ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 170 ರನ್​ಗಳ ಸವಾಲಿನ ಮೊತ್ತ ಕಲೆ ಹಾಕಿತು. ಉಪನಾಯಕಿ ಸ್ಮೃತಿ ಮಂಧಾನ 68 ರನ್​​ಗಳಿಸಿ ಟಾಪ್ ಸ್ಕೋರರ್ ಆಗಿದ್ದರು. 171 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 17 ಓವರ್​ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 106ಕ್ಕೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತು. ದೀಪ್ತಿ ಶರ್ಮಾ 5 ವಿಕೆಟ್ ಪಡೆದರೆ, ಶ್ರೀರಣಿ 3 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.

ಇದಕ್ಕೂ ಮುನ್ನ ಟಾಸ್​ ಗೆದ್ದ ಭಾರತ ಮಹಿಳಾ ತಂಡ ನಿರೀಕ್ಷಿಸಿದ ಆರಂಭ ಪಡೆಯಲಿಲ್ಲ. ಆರಂಭಿಕರಾದ ಶಫಾಲಿ ವರ್ಮಾ ಸಾದಿಯಾ ಇಕ್ಬಾಲ್​ ಎಸೆದ ಇನ್ನಿಂಗ್ಸ್​ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿದರೂ, ಅದೇ ಓವರ್​​ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ಔಟ್ ಆದರು. ನಂತರ ಬಂದ ಜೇಮೀಮಾ ರೋಡ್ರಿಗಸ್ 6 ಎಸೆತಗಳಲ್ಲಿ ಕೇವಲ 1 ರನ್​ಗಳಿಸಿ ತಸ್ಮಿಯಾ ರುಬಾಬ್​​​ ಬೌಲಿಂಗ್​​​ನಲ್ಲಿ ಪರ್ವೇಜ್​ಗೆ ಕ್ಯಾಚ್ ನೀಡಿ ಔಟ್ ಆದರು.

ಈ ಹಂತದಲ್ಲಿ ಒಂದಾದ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ 3ನೇ ವಿಕೆಟ್ ಜೊತೆಯಾಟದಲ್ಲಿ 91 ರನ್​ಗಳ ಜೊತೆಯಾಟ ನೀಡಿದರು. ಸ್ಮೃತಿ ಮಂಧಾನ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದರು. 44 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್​ಗಳ​ ಸಹಿತ 68 ರನ್​ಗಳಿಸಿದರು.

ಮಂಧಾನ ಬೆನ್ನಲ್ಲೆ ಭಾರತ ಸತತ ಎರಡು ವಿಕೆಟ್ ಕಳೆದುಕೊಂಡಿತು. ಭಾರತಿ ಫುಲ್ಮಾಲಿ 3 ಎಸೆತಗಳಲ್ಲಿ 1 ರನ್​ಗಳಿಸಿದರು.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed