ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ; ಹೈಕೋರ್ಟ್ ಸೂಚನೆ ಏನು? | Reduce Of School Bag Weight Issue HC Dismissed Petition

Karnataka

oi-Gururaj S

|

Google Oneindia Kannada News

ಬೆಂಗಳೂರು, ಜೂನ್ 22: ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸೂಕ್ತ ಅಧ್ಯಯನ ಮಾಡಿ ದಾಖಲೆ ಅಥವಾ ಮಾಹಿತಿಯೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಸೂಚನೆ ನೀಡಿದೆ.

ತುಮಕೂರಿನ ವಕೀಲ ಎಲ್‌. ರಮೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

1-10ನೇ ತರಗತಿ ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸುವ ಸುತ್ತೋಲೆ 1-10ನೇ ತರಗತಿ ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸುವ ಸುತ್ತೋಲೆ

School Bag Weight Issue HC Dismissed

‘ವಿಷಯವೇನೊ ಗಂಭೀರವಾಗಿದೆ. ಆದರೆ, ಅರ್ಜಿದಾರರು ಅಧಿಕಾರಿಗಳಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿರುವುದನ್ನು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟು ಸಮಸ್ಯೆ ಅರಿತಿದ್ದೇನೆ ಎಂಬ ಅವರ ವಾದಕ್ಕೆ ಪೂರಕವಾದ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ’ ಎಂದು ನ್ಯಾಯಪೀಠ ಹೇಳಿತು.

ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ: ಸರ್ಕಾರದ ಉತ್ತರ ಕೇಳಿದ ಹೈಕೋರ್ಟ್ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ: ಸರ್ಕಾರದ ಉತ್ತರ ಕೇಳಿದ ಹೈಕೋರ್ಟ್

ಅಲ್ಲದೆ, ಅರ್ಜಿದಾರರು ಅಗತ್ಯ ಮಾಹಿತಿ ಕಲೆ ಹಾಕಿದ ನಂತರ ಕೋರ್ಟ್‌ಗೆ ಬರಬಹುದಿತ್ತು. ಯಾವುದೇ ಪುರಾವೆಗಳಿಲ್ಲ. ಇದೊಂದು ಅರೆಬೆಂದ ಅರ್ಜಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಮೊದಲು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ಬಳಿಕ ಅರ್ಜಿದಾರರ ಮನವಿಯಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ನೀಡಿ ವಿಲೇವಾರಿ ಮಾಡಿತು.

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಶನಿವಾರ ಬ್ಯಾಗ್ ಲೆಸ್ ಡೇ! ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಶನಿವಾರ ಬ್ಯಾಗ್ ಲೆಸ್ ಡೇ!

ಅರ್ಜಿದಾರರು, ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು 2020ರಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ನಿಯಮ ಪಾಲನೆಯಾಗುತ್ತಿಲ್ಲ. ಆರೋಗ್ಯ ತಜ್ಞರ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಸಂವಿಧಾನದ 21ನೇ ವಿಧಿಯಡಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ಶಾಲಾ ಮಕ್ಕಳ ಬ್ಯಾಗ್ ತೂಕ; ಜೂನ್ 21ರ ಬುಧವಾರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಎಂಬ ವಿಷಯವನ್ನು ಇದು ಒಳಗೊಂಡಿದೆ. ಶಾಲಾ ಮಕ್ಕಳ ಬ್ಯಾಗ್ ತೂಕ ಎಷ್ಟಿರಬೇಕು ಎಂದು ಸುತ್ತೋಲೆ ಹೇಳಿದೆ. ಅಲ್ಲದೇ ಬ್ಯಾಗ್ ಹೊರೆ ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳನ್ನು ಸಹ ಇದರಲ್ಲಿ ವಿವರಿಸಲಾಗಿದೆ.

ವಿದ್ಯಾರ್ಥಿಯ ಶಾಲಾಬ್ಯಾಗ್‌ ತೂಕವು ಎಷ್ಟಿರಬೇಕು? ಎಂದು ನಿಗದಿ ಮಾಡಲಾಗಿದೆ ಸುತ್ತೋಲೆಯನ್ನು ಅದನ್ನು ವಿವರಿಸಲಾಗಿದದೆ. 1-2 ತರಗತಿಗೆ 1.5 ರಿಂದ 2 ಕಿ. ಗ್ರಾಂ, 3-5 ತರಗತಿಗೆ 2 ರಿಂದ 3 ಕಿ. ಗ್ರಾಂ, 6-8 ನೇ ತರಗತಿಗೆ 3 ರಿಂದ 4 ಕಿ. ಗ್ರಾಂ, 9-10 ತರಗತಿಗೆ 4 ರಿಂದ 5 ಕಿ. ಗ್ರಾಂ, ಇರಬೇಕು ಎಂದು ಹೇಳಲಾಗಿದೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುತ್ತೋಲೆ ಮೂಲಕ ಸೂಚನೆ ನೀಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law ಸಹಯೋಗದೊಂದಿಗೆ ಡಿ. ಎಸ್. ಇ. ಆರ್. ಟಿಯವರು ಒಂದು ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು.

ಈ ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10 ರಿಂದ 15ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಫಾರಸು ಮಾಡಿರುತ್ತಾರೆ. ಈ ವರದಿ ಹಿನ್ನೆಲೆಯಲ್ಲಿ ಸುತ್ತೋಲೆಯನ್ನು ಪ್ರಕಟಿಸಲಾಗಿದೆ.

ಸುತ್ತೋಲೆಯಲ್ಲಿ ಆಯುಕ್ತರು ಕ್ಲಸ್ಟರ್ ಹಂತದಲ್ಲಿ ಸಿ. ಆರ್. ಪಿ ಮತ್ತು ಇ. ಸಿ. ಒಗಳು ಬ್ಲಾಕ್ ಹಂತದಲ್ಲಿ ಬಿ. ಆರ್. ಸಿ ಮತ್ತು ಬಿ. ಇ. ಒ ರ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು ಪ್ರಾಂಶುಪಾಲರು ಡಯಟ್‌ರವರು ಶಾಲಾಬಾಗ್ ಹೊರೆ ಕಡಿತಗೊಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಶಾಲಾ ಭೇಟಿ ಮತ್ತು ಪರಿಶೀಲನೆ ಮಾಡುವುದರ ಮೂಲಕ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

English summary

Karnataka High Court dismissed petition seeking primary school students bag wight reduce. Court allowed petitioner to file fresh petition with all related details.

Source link