Karnataka
oi-Punith BU

ಮಂಗಳೂರು, ಜುಲೈ 14: ರಾಜ್ಯ ಕ್ರಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆದ ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ರೀ ಮಂಜುನಾಥನ ದೇಗುಲಕ್ಕೆ ಭೇಟಿ ನೀಡುವಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 14ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ ಪತ್ರದಲ್ಲಿ ಹೆಗ್ಗಡೆ ಅಭಿನಂದನೆ ಸಲ್ಲಿಸಿದ್ದಾರೆ.

ನೀವು ಜನರಿಗೆ ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ ಎಂದು ರಾಜ್ಯಸಭಾ ಸದಸ್ಯ ಹೆಗ್ಗಡೆ ಹೇಳಿದ್ದಾರೆ. ಹೆಗ್ಗಡೆಯವರು ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರು ವಿಶೇಷವಾಗಿ ಮಹಿಳೆಯರು ಹರ್ಷ ವ್ಯಕ್ತಪಡಿಸುತ್ತಾರೆ. ನಿಮ್ಮ ಹೆಸರಿನಲ್ಲಿ ಹಲವಾರು ಮಹಿಳೆಯರು ಶ್ರೀ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಮತ್ತು ದೇಣಿಗೆ ನೀಡುತ್ತಿದ್ದಾರೆ. ಜೈನ ಸಮುದಾಯಕ್ಕೆ ಸಿದ್ದರಾಮಯ್ಯ ನೀಡಿದ ವಿಶೇಷ ಅನುದಾನದಿಂದ ಸಂತೋಷವಾಗಿದೆ. ಅವಕಾಶ ಸಿಕ್ಕಾಗ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಿರಿ ಎಂದು ಅಹ್ವಾನ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎ ಸಿದ್ದರಾಮಯ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೂ.11 ರಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇನ್ನು ಜೂ.11ರಿಂದ ಜುಲೈ 10ರವರೆಗೆ ಅಂದರೆ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 16,75,77,752 ಮಹಿಳಾ ಪ್ರಯಾಣಿಕರು (16.75 ಕೋಟಿ) ಸಂಚಾರ ಮಾಡಿದ್ದಾರೆ. ಈ ಯೋಜನೆಗೆ ಮಹಿಳೆಯರಿಂದ ಅಭೂತಪೂರ್ವ ಬೆಂಬಲವೂ ವ್ಯಕ್ತವಾಗಿದೆ.
ಜುಲೈ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಜುಲೈ 10ಕ್ಕೆ ಒಂದು ತಿಂಗಳು ಪೂರ್ಣಗೊಂಡಿದೆ. ಇನ್ನು ಮಹಿಳೆಯರ ಪ್ರಯಾಣದ ವೆಚ್ಚ 399 ಕೋಟಿ ರೂಪಾಯಿ ಆಗಿದೆ ಸರ್ಕಾರ ಮಾಹಿತಿ ನೀಡಿದೆ. ಕರ್ನಾಟಕ ವಿಧಾನಸಭಾ ಚುನಾವನೆಯಲ್ಲಿ 5 ಪ್ರಮುಖ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಬಹುತಮದ ಸರ್ಕಾರವಾಗಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದ್ದರು.

2018ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ಮೀನು ತಿಂದು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು ಎಂಬ ವಿಚಾರ ಭಾರೀ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದು ಚುನಾವಣಾ ವಿಷಯವೂ ಆಗಿತ್ತು. ಆದರೆ ಈಗ ರಾಜ್ಯ ಸರ್ಕಾರದ ಯೋಜನೆಯಿಂದ ಲಕ್ಷಾಂತರ ಭಕ್ತರು ಧರ್ಮಸ್ಥಳಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರನ್ನು ಹೊಗಳುತ್ತಿದ್ದಾರೆ, ಮಾತ್ರವಲ್ಲದೆ ಅವರ ಹೆಸರಿನಲ್ಲಿ ಪೂಜೆಯೂ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ನಾನು ಧರ್ಮಸ್ಥಳಕ್ಕೆ ಕಾರ್ಯಕ್ರಮವೊಂದರ ನಿಮಿತ್ತ ಹೋಗಿದ್ದೆ, ವೀರೇಂದ್ರ ಹೆಗ್ಗಡೆ ಅವರ ಒತ್ತಾಯಕ್ಕೆ ಮಣಿದು ದೇವಸ್ಥಾನಕ್ಕೆ ಹೋಗಿದ್ದೆ. ಆದ್ರೆ, ಗರ್ಭಗುಡಿ ಪ್ರವೇಶ ಮಾಡಿಲ್ಲ. ಹೊರಗಡೆಯೇ ನಿಂತು ನಮಸ್ಕಾರ ಮಾಡಿ ಹೊರಬಂದಿದ್ದೆ ಎಂದಿದ್ದರು. ಎಲ್ಲಕ್ಕಿಂತಾ ಹೆಚ್ಚಾಗಿ ಅಂದು ತಾವು ಮೀನು ಮಾತ್ರವಲ್ಲ, ಕೋಳಿಯನ್ನೂ ತಿಂದಿದ್ದೆ ಎಂದು ಹೇಳಿದ್ದರು. ಜೊತೆಯಲ್ಲೇ ಆಹಾರದ ವಿಚಾರವಾಗಿ ಏಕೆ ತಾರತಮ್ಯ ಮಾಡುತ್ತೀರಿ ಎಂಬ ಪ್ರಶ್ನೆಯನ್ನೂ ಎತ್ತಿದ್ದರು.
English summary
In view of the success of the state Congress government’s ambitious Shakti project, Dharamsthala Dharmadhikari, who is also a member of the Rajya Sabha. Veerendra heggade has written a letter to Chief Minister Siddaramaiah requesting him to visit Dharamsthala.
Story first published: Friday, July 14, 2023, 10:31 [IST]