Darshan: ಕೋರ್ಟ್‌ ವಿಚಾರಣೆಗೂ ಮುನ್ನವೇ ದರ್ಶನ್ ಮುಖದಲ್ಲಿ ಬೇಸರ! ಪವಿತ್ರಾ ಗೌಡ ಫುಲ್ ಹ್ಯಾಪಿ! ಏನಿದರ ಅಸಲಿಯತ್ತು? | | ACTPnews

ನಟ ದರ್ಶನ್ ಮತ್ತು ಪವಿತ್ರಾ ಗೌಡ


Last Updated:

ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಜೈಲಿನಿಂದಲೇ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದು . ಭದ್ರತಾ  ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮತ್ತು ಪವಿತ್ರಾ ಗೌಡ
ನಟ ದರ್ಶನ್ ಮತ್ತು ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಇದೀಗ ಮತ್ತೊಂದು ಮಹತ್ವದ ಹಂತಕ್ಕೆ ಕಾಲಿಟ್ಟಿದೆ. ನಟ ದರ್ಶನ್ ( Darshan) , ಪವಿತ್ರಾ ಗೌಡ (Pavitra Gowda) ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣದ ಟ್ರಯಲ್ ಇಂದು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಆರಂಭವಾಗಿದೆ. ಬೆಂಗಳೂರಿನ ಸಿಸಿಹೆಚ್-59 ನ್ಯಾಯಾಲಯದಲ್ಲಿ ವಿಚಾರಣೆ ನಡೆಯತಿದ್ದು . ನ್ಯಾಯಾಧೀಶೆ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರ ಮುಂದೆ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ.

ಹಿಂದಿನ ನ್ಯಾಯಾಲಯದಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಕಡತಗಳನ್ನು ಹೊಸ ನ್ಯಾಯಾಲಯಕ್ಕೆ ಅಧಿಕೃತವಾಗಿ ವರ್ಗಾಯಿಸಲಾಗಿದ್ದು, ವಿಚಾರಣೆಯ ಪ್ರಕ್ರಿಯೆ ಮುಂದುವರಿದಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಜೈಲಿನಿಂದಲೇ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದು . ಭದ್ರತಾ  ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕೆಲವು ಆರೋಪಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದ ನಟ ದರ್ಶನ್ ಅವರ ಉಪಸ್ಥಿತಿ ಎಲ್ಲರ ಗಮನ ಸೆಳೆಯಿತು. ನೀಲಿ ಬಣ್ಣದ ಪುಲ್‌ಓವರ್ ಧರಿಸಿ ವಿಚಾರಣೆಯಲ್ಲಿ ಕಾಣಿಸಿಕೊಂಡ ದರ್ಶನ್ ತುಂಬಾನೇ ಬೇಸರದಲ್ಲಿ ಇರುವಂತೆ ಕಾಣಿಸಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ, ಪವಿತ್ರಾ ಗೌಡ ಅವರು ಕೂಡ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಅವರು ಮಹಿಳಾ ಬ್ಯಾರಕ್ ವಿಭಾಗದ ಪ್ರತ್ಯೇಕ ಸೆಲ್‌ನಿಂದ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆಂದು ತಿಳಿದುಬಂದಿದೆ. ಜೊತೆಗೆ ಪವಿತ್ರಾ ಗೌಡ ಫುಲ್ ಹ್ಯಾಪಿ ಮೂಡ್ ನಲ್ಲಿ ಕುಳಿತಿದ್ದಾರೆ ಎಂದು ವರದಿಯಾಗಿದೆ.

(ವರದಿ: ಗಂಗಾಧರ ವಾಗಟ, ನ್ಯೂಸ್​18 ಕನ್ನಡ)



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed