Jobs
oi-Punith BU

ಬೆಂಗಳೂರು, ಜೂನ್ 22: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್, ಉಳಿಕೆ ಮೂಲವೃಂದ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ , ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿವಿಧ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಇಂತಿದೆ
1. ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮದಲ್ಲಿಒಟ್ಟು 26 ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)- ಗ್ರೂಪ್-ಬಿ
ಆಪ್ತ ಕಾರ್ಯದರ್ಶಿ ಗ್ರೂಪ್ -ಸಿ
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ
ಸಹಾಯಕರು (ತಾಂತ್ರಿಕ) ಗ್ರೂಪ್ -ಸಿ
ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ
ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ.
Indian Railways: ಭಾರತೀಯ ರೈಲ್ವೇ ನೇಮಕಾತಿ 2023: ಯಾವ ಪೋಸ್ಟ್, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ ತಿಳಿಯಿರಿ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಸಹಾಯಕ ವ್ಯವಸ್ಥಾಪಕರು
ಗುಣಮಟ್ಟ ನಿರೀಕ್ಷಕರು
ಹಿರಿಯ ಸಹಾಯಕರು (ಲೆಕ್ಕ)
ಹಿರಿಯ ಸಹಾಯಕರು
ಕಿರಿಯ ಸಹಾಯಕರ ಹುದ್ದೆಗಳು ಖಾಲಿ ಇವೆ.
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕಲ್ಯಾಣ ಅಧಿಕಾರಿ (ಗ್ರೂಪ್ -ಸಿ)
ಕ್ಷೇತ್ರ ನಿರೀಕ್ಷಕರು (ಗ್ರೂಪ್ -1)
ಪ್ರಥಮ ದರ್ಜೆ ಸಹಾಯಕರು (ಗ್ರೂಪ್ -ಸಿ)
ಆಪ್ತ ಸಹಾಯಕರು (ಗ್ರೂಪ್ -ಸಿ)
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ -ಸಿ) ಹುದ್ದೆಗಳು ಖಾಲಿ ಇವೆ.

ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ನಲ್ಲಿ ಖಾಲಿ ಇರುವ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ಸೇಲ್ಸ್ ), (ಅಕೌಂಟ್ಸ್), (ಪರ್ಸನಲ್ )
ಸಹಾಯಕ ವ್ಯವಸ್ಥಾಪಕರು (ಫಾರ್ಮ)
ಸಹಾಯಕ ವ್ಯವಸ್ಥಾಪಕರು (ಟೂರ್ಸ್ ಮತ್ತು ಟ್ರಾವಲ್ಸ್)
ಸಹಾಯಕ ವ್ಯವಸ್ಥಾಪಕರು (ಇ.ಡಿ.ಪಿ)
ಸೇಲ್ಸ್ ಮೇಲ್ವಿಚಾರಕರು ಮಾರಾಟ ಪ್ರತಿನಿಧಿ
ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್)
ಸೇಲ್ಸ್. ಇಂಜಿನಿಯರ್ (ಎಲೆಕ್ನಿಕಲ್)
ಸೇಲ್ ಇಂಜಿನಿಯರ್ (ಸಿವಿಲ್)
ಸೇಲ್ಸ್ ಇಂಜಿನಿಯರ್ (ಇ&ಸಿ)
ಲೆಕ್ಕ ಗುಮಾಸ್ತರು ಗುಮಾಸ್ತರ ಹುದ್ದೆಗಳು ಖಾಲಿ ಇವೆ.
ವಿವಿಧ ಸರ್ಕಾರಿ ಇಲಾಖೆ, ಸಂಸ್ಥೆಗಳಲ್ಲಿನ ನೇಮಕಾತಿಗೆ ಹುದ್ದೆವಾರು ಮತ್ತು ವರ್ಗವಾರು ವರ್ಗೀಕರಣ, ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗೂ ನೇಮಕಾತಿಗೆ ಸಂಬಂಧಿಸಿದ ಇತರ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಜೂನ್ 23 ರಂದು ಪ್ರಕಟಿಸಲಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ( http://kea.kar.nic.in ) ನಿಗದಿತ ಲಿಂಕ್ ಆಯ್ಕೆ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕ
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ – 23-06-2023, ಮಧ್ಯಾಹ್ನ 2 ರಿಂದ.
ಇ-ಆಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿ (ಕಚೇರಿ ವೇಳೆಯಲ್ಲಿ)- 26-06-2023, ಬೆಳಗ್ಗೆ 11.00 ರಿಂದ.
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22-07-2023 ಸಂಜೆ 5.30 ರವರೆಗೆ.
ಶುಲ್ಕ ಪಾವತಿಗೆ ಕೊನೆಯ ದಿನಾಂಕ (ಕಚೇರಿ ವೇಳೆಯಲ್ಲಿ) – 25-07-2023 ಕೊನೆ ದಿನವಾಗಿರುತ್ತದೆ.
ಕೆಇಎನಿಂದ ಅಭ್ಯರ್ಥಿಗಳಿಗೆ ಸೂಚನೆಗಳು
ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಪ್ರತಿ ಹುದ್ದೆಗೆ ಶುಲ್ಕವನ್ನು ಪಾವತಿಸಬೇಕು.
ಪ್ರತಿ ಹುದ್ದೆಗೆ ಅರ್ಜಿಯಲ್ಲಿ ಕ್ಲೇಮ್ ಮಾಡುವ ಶೈಕ್ಷಣಿಕ ಅರ್ಹತೆ ಹಾಗೂ ಮೀಸಲಾತಿ ವಿವರಗಳು ಆಯಾ ನಿರ್ದಿಷ್ಟ ಹುದ್ದೆಗೆ ಮಾತ್ರ ಅನ್ವಯಿಸುತ್ತದೆ.
ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು. ಅಭ್ಯರ್ಥಿಗಳಿಗೆ ಈ ಮೇಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ. ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.
English summary
Karnataka Examinations Authority has invited applications for many posts including Backlog, Remaining Primary Vacancies in various Corporation Boards of Karnataka Government.
Story first published: Thursday, June 22, 2023, 10:26 [IST]