Last Updated:
ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯನ್ನು ಕೂಡಲೇ ಗುಮ್ಮಿಡಿಪೂಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆಗಲ್ಲ ಎಂದು ತಿಳಿದಾಗ ನಂತರ ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸೋಮವಾರ ಬೆಳಿಗ್ಗೆ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಳು ಎಂದು ವೈದ್ಯರು ತಿಳಿಸಿದ್ದಾರೆ.
ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಗುಮ್ಮಿಡಿಪೂಂಡಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮೂರು ವರ್ಷದ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
19 ವರ್ಷದ ಆರೋಪಿ ಬಿಹಾರದ ಮೂಲ ನಿವಾಸಿಯಾಗಿದ್ದು, ಗುಮ್ಮಿಡಿಪೂಂಡಿಯ SIPCOT ಕೈಗಾರಿಕಾ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಕೂಡ ಆರೋಪಿಯೊಂದಿಗೆ ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಾರೆ ಮತ್ತು ಅವರು ಒಂದೇ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯನ್ನು ಕೂಡಲೇ ಗುಮ್ಮಿಡಿಪೂಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆಗಲ್ಲ ಎಂದು ತಿಳಿದಾಗ ನಂತರ ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸೋಮವಾರ ಬೆಳಿಗ್ಗೆ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಳು ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ಬಿಸ್ಕತ್ತು ಖರೀದಿಸಿ ಕೊಡುತ್ತೇನೆ ಎಂದು ನೆಪ ಹೇಳಿ ಆಕೆಯನ್ನು ಹತ್ತಿರದ ಅಂಗಡಿಗೆ ಕರೆದೊಯ್ದು ನಿರ್ಜನ ಸ್ಥಳದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸದ್ಯ ಆರೋಪಿಯನ್ನು ಬಿಪಿನ್ ಮಾಂಝಿ ಎಂದು ಗುರುತಿಸಲಾಗಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ಸಾರ್ವಜನಿಕರು ಆತನನ್ನು ಹಿಡಿದು ಸರಿಯಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ತಮಿಳುನಾಡಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ ಸರ್ಕಾರವನ್ನು ವಿರೋಧ ಪಕ್ಷ ಡಿಎಂಕೆ ಪ್ರಶ್ನಿಸಿದ್ದು, ಈ ವಿಷಯವು ರಾಜಕೀಯ ವಿವಾದಕ್ಕೂ ಕಾರಣವಾಗಿದೆ.