Last Updated:
ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದ್ದ ಬಹುಚರ್ಚಿತ ‘ಬಾಸ್’ (Boss) ಸಿನಿಮಾಗೆ ಮತ್ತೆ ಕಾನೂನು ಅಡ್ಡಿ ಎದುರಾಗಿದೆ.
ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದ್ದ ಬಹುಚರ್ಚಿತ ‘ಬಾಸ್’ (Boss) ಸಿನಿಮಾಗೆ ಮತ್ತೆ ಕಾನೂನು ಅಡ್ಡಿ ಎದುರಾಗಿದೆ. ಚಿತ್ರದ ಬಿಡುಗಡೆಗೆ ಸಂಬಂಧಿಸಿದ ವಿವಾದ ಹೊಸ ತಿರುವು ಪಡೆದುಕೊಂಡಿದ್ದು, ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ (Vijayalakshmi) ಇದೀಗ ಕರ್ನಾಟಕ ಹೈಕೋರ್ಟ್ನ ಮೆಟ್ಟಿಲೇರಿದ್ದಾರೆ.
ಸ್ಯಾಂಡಲ್ವುಡ್ ನಟ ತನುಷ್ ಶಿವಣ್ಣ (Tanush Shivanna) ಅಭಿನಯದ ‘ಬಾಸ್’ (Boss Movie) ಚಿತ್ರವು ಆರಂಭದಿಂದಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದೆ. ಅಷ್ಟೇ ಅಲ್ಲದೆ ಈ ಚಿತ್ರದ ಟೀಸರ್ ಬಿಡುಗಡೆಯಾದ ಸಂದರ್ಭದಲ್ಲಿ ಈ ವಿಷ್ಯ ಮತ್ತೆ ಚರ್ಚೆಗೆ ಕಾರಣವಾಗಿತ್ತು. ಜೊತೆಗೆ ಇದು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು (Renukaswamy Case) ಆಧರಿಸಿದ ಸಿನಿಮಾ ಎಂದೇ ಹೇಳಲಾಗುತ್ತಿತ್ತು. ಇದೀಗ ಈ ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಕಾನೂನು ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಸ್ ಸಿನಿಮಾ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ.
ಬಾಸ್ ಚಿತ್ರದ ಕಥೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯನ್ನು ಹೋಲುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಅಧಿಕೃತವಾಗಿ ಚಿತ್ರತಂಡ ಇದನ್ನು ದೃಢಪಡಿಸದಿದ್ದರೂ, ಚಿತ್ರದ ಕಥೆ ಹಾಗೂ ಕೆಲವು ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಪರೋಕ್ಷವಾಗಿ ನಮ್ಮ ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳನ್ನು ಚಿತ್ರದಲ್ಲಿ ಪ್ರಸ್ತಾಪಿಸಲಾಗಿದೆ ಅಂತ ವಿಜಯಲಕ್ಷ್ಮಿ ದರ್ಶನ್ ತಮ್ಮ ಅಳಲು ತೋಡಿಕೊಂಡಿದ್ದರು. ಜೊತೆಗೆ ಈ ಸಂದರ್ಭದಲ್ಲಿ ಸಿನಿಮಾ ಬಿಡುಗಡೆಯಾದಲ್ಲಿ ನಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ವಿಜಯಲಕ್ಷ್ಮಿ ದರ್ಶನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
Bangalore [Bangalore],Bangalore,Karnataka













