Road Accident: ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ! ಆರು ಮಂದಿ ಸ್ಥಳದಲ್ಲೇ ಸಾವು, 26 ಮಂದಿಗೆ ಗಂಭೀರ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಗಾಯಗೊಂಡ ಪ್ರಯಾಣಿಕರೊಬ್ಬರ ಪ್ರಕಾರ, ಟ್ರಕ್ ಚಾಲಕ ಟೈರ್ ಒತ್ತಡ ಪರಿಶೀಲಿಸುತ್ತಿದ್ದಾಗ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು, ಆಗ ವೇಗವಾಗಿ ಬಂದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

News18
News18

ವಡೋದರಾ: ರಾಜಸ್ಥಾನದಿಂದ ಗುಜರಾತ್‌ನ ಸೂರತ್‌ಗೆ ಹೋಗುತ್ತಿದ್ದ ಐಷಾರಾಮಿ ಬಸ್ ವಡೋದರಾ (Road Accident) ನಗರದ ಕೋಟಂಬಿ ಕ್ರೀಡಾಂಗಣದ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದು, 26 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ವಡೋದರಾ-ಹಲೋಲ್ ಹೆದ್ದಾರಿಯ ಕೋಟಂಬಿ ಗ್ರಾಮದ ಬಳಿ ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬಸ್ಸಿಗೆ ಆಗಿರುವ ಹಾನಿಯ ಪ್ರಮಾಣವನ್ನು ಪರಿಗಣಿಸಿ, ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಸಹ ಕರೆಯಲಾಯಿತು.

ಗಾಯಾಳುಗಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ತುರ್ತು ವಿಭಾಗದ ವೈದ್ಯರ ತಂಡವು ತಕ್ಷಣ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಪ್ರಾರಂಭಿಸಿತು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ರಾಜಸ್ಥಾನದವರು ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ನಾಲ್ಕರಿಂದ ಐದು ಕಿಲೋಮೀಟರ್‌ಗಳಷ್ಟು ಸಂಚಾರ ದಟ್ಟಣೆ ಉಂಟಾಗಿದ್ದು, ತುರ್ತು ಸೇವೆಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡಿವೆ. ಅಪಘಾತದ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports