ಈ ಹಿಂದೆ ಭಾರತದ ಕುಸ್ತಿ ಫೆಡರೇಶನ್ ಚುನಾವಣೆಯನ್ನು ಜುಲೈ 6ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಈಗ ಚುನಾವಣೆಯನ್ನು ಜುಲೈ 11ಕ್ಕೆ ಮುಂದೂಡಲಾಗಿದೆ. ತಾತ್ಕಾಲಿಕ ಸಮಿತಿಯ ಮುಂದೆ ದೇಶದ ಕನಿಷ್ಠ 10 ರಾಜ್ಯಗಳ ಕುಸ್ತಿ ಘಟಕಗಳು ವಿವಿಧ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.