Bengaluru
oi-Mamatha M
ಬೆಂಗಳೂರು, ಜುಲೈ. 16: ಬಿಹಾರದ ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಮೊದಲ ಸಭೆಯ ಯಶಸ್ಸಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಾಗುತ್ತಿದೆ. ಜುಲೈ 17 ರಂದು ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಪ್ರಾರಂಭವಾಗಲಿರುವ ಸಮಾವೇಶದ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಜ್ಯ ಗೃಹ ಸಚಿವ ಪರಮೇಶ್ವರ್ ಪರಿಶೀಲಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಎರಡನೇ ಏಕತಾ ಸಭೆಯಲ್ಲಿ ಭಾಗವಹಿಸುವಂತೆ ವಿಪಕ್ಷಗಳ ಉನ್ನತ ನಾಯಕರನ್ನು ಆಹ್ವಾನಿಸಿದ್ದಾರೆ. ಇದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೂನ್ 23 ರಂದು ಪಾಟ್ನಾದಲ್ಲಿ ನಡೆಸಿದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದನ್ನು ವಿರೋಧ ಪಕ್ಷದ ನಾಯಕರಿಗೆ ಬರೆದ ಪತ್ರದಲ್ಲಿ ನೆನಪಿಸಿದ್ದಾರೆ.
ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಆಹ್ವಾನ ಪತ್ರಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಗೆ ಬಂದು ಮಲ್ಲೇಶ್ವರಂ ನಲ್ಲಿ ಗೆದ್ದು ತೋರಿಸಿ; ಅಶ್ವತ್ಥ ನಾರಾಯಣಗೆ ಸವಾಲು ಹಾಕಿದ ಶಿವಲಿಂಗೇಗೌಡ
ಜುಲೈ 17 ರಿಂದ 18 ರವರೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಪ್ರತಿಪಕ್ಷದ ಏಕತೆಯ ಸಭೆಯಲ್ಲಿ ಕನಿಷ್ಠ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧದ ಒಗ್ಗಟ್ಟನ್ನು ತೋರಿಸಿರುವ ವಿರೋಧ ಪಕ್ಷಗಳ ಪ್ರಯತ್ನಗಳಿಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ.
ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಸೋಮವಾರದಿಂದ ನಡೆಯಲಿರುವ ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದೆ.
ಕರ್ನಾಟಕ ಉಸ್ತುವಾರಿಗಳಾದ @rssurjewala, ಗೃಹ ಸಚಿವರಾದ @DrParameshwara ಅವರು ಸೇರಿದಂತೆ ಹಲವು ನಾಯಕರು ಈ ವೇಳೆ ನನ್ನೊಂದಿಗಿದ್ದರು. pic.twitter.com/iRWUgL667Y— Siddaramaiah (@siddaramaiah) July 15, 2023
“ಕಳೆದ ತಿಂಗಳು ಬಿಹಾರದ ಪಾಟ್ನಾದಲ್ಲಿ ನಡೆದ ಬೃಹತ್ ಪ್ರತಿಪಕ್ಷಗಳ ಸಭೆಯ ನಂತರ, ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ” ಎಂದು ಮೂಲಗಳು ತಿಳಿಸಿವೆ.
“ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK), ಕೊಂಗು ದೇಸ ಮಕ್ಕಳ್ ಕಚ್ಚಿ (KDMK), ವಿದುತಲೈ ಚಿರುತೈಗಲ್ ಕಚ್ಚಿ (VCK), ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಕೇರಳ ಕಾಂಗ್ರೆಸ್ (ಜೋಸೆಫ್), ಮತ್ತು ಕೇರಳ ಕಾಂಗ್ರೆಸ್ (ಮಣಿ) ಸಭೆ ಸೇರಲಿರುವ ಹೊಸ ರಾಜಕೀಯ ಪಕ್ಷಗಳಲ್ಲಿ ಸೇರಿವೆ” ಎಂದು ಮೂಲಗಳು ಮಾಹಿತಿ ನೀಡಿವೆ.
“ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದಾರೆ. ವಿಶೇಷವೆಂದರೇ, ವಿಪಕ್ಷಗಳಿಗೆ ಬೆಂಬಲ ನೀಡಲು ಸಿದ್ಧವಾಗಿರುವ ಕೆಡಿಎಂಕೆ ಮತ್ತು ಎಂಡಿಎಂಕೆ ಈ ಹಿಂದೆ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು.
English summary
Bengaluru Opposition Meet: Chief Minister Siddaramaiah, state in-charge Randeep Singh Surjewala and Home Minister Parameshwar inspected the preparations for the 2nd meeting of leaders of the Opposition parties. know more.
Story first published: Sunday, July 16, 2023, 9:57 [IST]