Last Updated:
ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರೂಪಿಕಾ (Actress Rupika) ಅವರ ಜೀವನದಲ್ಲಿ ಇದೀಗ ಹೊಸ ಸಂಭ್ರಮ ಮನೆ ಮಾಡಿದೆ.
ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರೂಪಿಕಾ (Actress Roopika) ಅವರ ಜೀವನದಲ್ಲಿ ಇದೀಗ ಹೊಸ ಸಂಭ್ರಮ ಮನೆ ಮಾಡಿದೆ. ನಟಿಯಾಗಿ, ಭರತನಾಟ್ಯ ಕಲಾವಿದೆಯಾಗಿ ಪ್ರೇಕ್ಷಕರ ಮನ ಗೆದ್ದಿರುವ ರೂಪಿಕಾ ಸದ್ಯ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಂಕಿತ್ (Ankit ) ಅವರೊಂದಿಗೆ ನಿಶ್ಚಿತಾರ್ಥ (Engagement) ಮಾಡಿಕೊಂಡಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.
ರೂಪಿಕಾ ಮತ್ತು ಅಂಕಿತ್ ಅವರ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಕುಟುಂಬದ ಸದಸ್ಯರು, ಆಪ್ತರು ಹಾಗೂ ಬಂಧುಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಈ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೊಸ ಜೋಡಿಗೆ ಶುಭಾಶಯದ ಮಹಾಪೂರವೇ ಹರಿದು ಬರ್ತಿದೆ.
ರೂಪಿಕಾ ಅವರ ಕೈಹಿಡಿಯಲಿರುವ ಅಂಕಿತ್ ಮೂಲತಃ ಬೆಂಗಳೂರಿನವರು. ಕಳೆದ ಐದು ವರ್ಷಗಳಿಂದ ಅವರು ಕೆನಡಾದಲ್ಲಿ ನೆಲೆಸಿದ್ದು, ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಿದ್ದಾರೆ. ಪ್ರಸ್ತುತ ಅವರು ಕೆನಡಾದ ಖ್ಯಾತ ಇನ್ವೆಸ್ಕೋ ಸಂಸ್ಥೆಯಲ್ಲಿ ಟ್ಯಾಕ್ಸ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರೂಪಿಕಾ ಕನ್ನಡ ಚಿತ್ರರಂಗದಲ್ಲಿ ಹಲವು ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ನಾಯಕಿಯಾಗಿ ಅಭಿನಯಿಸಿದ ಅವರು ನಂತರ ಅನೇಕ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಥರ್ಡ್ ಕ್ಲಾಸ್, ಮಾಯದಂತ ಮಳೆ, ನವರಂಗಿ, ಮಂಜರಿ, ಬೀರ, ತೀರ್ಥರೂಪ, ಮಜ್ಜಿಗೆ ಹುಳಿ,ರಾಗ, ಡೈಮಂಡ್ ಕ್ರಾಸ್ ಹಾಗೂ ರುದ್ರಾಕ್ಷಿ ಪುರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗದೆ ರೂಪಿಕಾ ತೆಲುಗು ಚಿತ್ರರಂಗದಲ್ಲೂ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಚಿಲ್ ಬ್ರೋ ಹಾಗೂ ಜನ್ಮಸ್ಥಾನಂ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ತೆಲುಗು ಪ್ರೇಕ್ಷಕರಿಗೂ ಪರಿಚಿತರಾಗಿದ್ದಾರೆ.
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿಂಚನಾ ಪಾತ್ರದಲ್ಲಿ ನಟಿಸುತ್ತಿದ್ದಾರೆ ರೂಪಿಕಾ. ಈ ಮೊದಲು ಸಿಂಚನಾ ಪಾತ್ರದಲ್ಲಿ ‘ನಾಗ ಪಂಚಮಿ’ ಧಾರಾವಾಹಿ ಖ್ಯಾತಿಯ ದಿವ್ಯಶ್ರೀ ಅಭಿನಯಿಸುತ್ತಿದ್ದರು.’ತ್ರಿವೇಣಿ ಸಂಗಮ’,’ಬೆಳ್ಳಿಚುಕ್ಕಿ’, ‘ಅವಳ ಮನೆ’, ‘ಬದುಕು’ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಬಾಲನಟಿಯಾಗಿ ಬಣ್ಣ ಹಚ್ಚಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ದೊರೆಸಾನಿ’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.
Bangalore [Bangalore],Bangalore,Karnataka













