Bengaluru Opposition Meet: ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದ ನಡುವೆಯೇ ವಿಪಕ್ಷಗಳ ಸಭೆಗೆ ಬರಲಿದೆಯೇ ಎಎಪಿ? | Will AAP Joins Bengaluru Opposition Meet?

Bengaluru

oi-Mamatha M

|

Google Oneindia Kannada News

ನವದೆಹಲಿ, ಜುಲೈ. 16: ಜುಲೈ 17 ಮತ್ತು 18 ರಂದು ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವ ಕುರಿತು ಚರ್ಚಿಸಲು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಭಾನುವಾರ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರದ ಬಗ್ಗೆಯೂ ಪಕ್ಷವು ಚರ್ಚಿಸಲಿದೆ.

ಭಾನುವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರು ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾಗವಹಿಸಲಿದ್ದಾರೆ. ಇದರಲ್ಲಿಯೇ ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದ ನಡುವೆಯೂ ವಿರೊಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

Will AAP Joins Bengaluru Opposition Meet?

ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯ ನಂತರ, ಎಎಪಿ ಹೇಳಿಕೆಯನ್ನು ನೀಡಿದ್ದು, ಕಾಂಗ್ರೆಸ್‌ನ ಹಿಂಜರಿಕೆ ಮತ್ತು ಒಂದು ತಂಡದ ಪಾಲುದಾರರಾಗಿ ಕಾರ್ಯನಿರ್ವಹಿಸಲು ಕಾಂಗ್ರೆಸ್ ನಿರಾಕರಿಸುವುದರಿಂದ ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಮೈತ್ರಿಕೂಟದ ಭಾಗವಾಗಲು ಕಷ್ಟವಾಗುತ್ತದೆ” ಎಂದು ಹೇಳಿತ್ತು.

Bengaluru Opposition Meet: ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ, ಸಿದ್ಧತೆ ಪರಿಶೀಲಿಸಿದ ಸಿದ್ದರಾಮಯ್ಯ, ಪರಮೇಶ್ವರ್Bengaluru Opposition Meet: ನಾಳೆ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ, ಸಿದ್ಧತೆ ಪರಿಶೀಲಿಸಿದ ಸಿದ್ದರಾಮಯ್ಯ, ಪರಮೇಶ್ವರ್

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿವಾದಾಸ್ಪದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಸಾರ್ವಜನಿಕವಾಗಿ ವಿರೋಧಿಸುವವರೆಗೆ ಆ ಪಕ್ಷವನ್ನು ಅನ್ನು ಒಳಗೊಂಡಿರುವ ಯಾವುದೇ ಭವಿಷ್ಯದ ವಿರೋಧ ಪಕ್ಷಗಳ ಸಭೆಗಳ ಭಾಗವಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷವು ಹೇಳಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ 2ನೇ ಸಭೆಗೆ 24 ವಿರೋಧ ಪಕ್ಷಗಳನ್ನು ಆಹ್ವಾನಿಸಲಾಗಿದೆ. ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ವಿರೋಧಿಸಿದ್ದ ಎಎಪಿಗೆ ಸಹ ಸಭೆಗೆ ಆಹ್ವಾನ ನೀಡಲಾಗಿದೆ. ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಇದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಇಬ್ಭಾಗದ ನಂತರ ಮೊದಲ ಬಾರಿಗೆ ವಿಪಕ್ಷಗಳ ಸಭೆ ನಡೆಯುತ್ತಿದೆ.

Will AAP Joins Bengaluru Opposition Meet?

ಇನ್ನು, ನಾಳೆಯಿಂದ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಪ್ರಾರಂಭವಾಗಲಿರುವ ವಿಪಕ್ಷಗಳ ಸಮಾವೇಶದ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಜ್ಯ ಗೃಹ ಸಚಿವ ಪರಮೇಶ್ವರ್ ಪರಿಶೀಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಎರಡನೇ ಏಕತಾ ಸಭೆಯಲ್ಲಿ ಭಾಗವಹಿಸುವಂತೆ ವಿಪಕ್ಷಗಳ ಉನ್ನತ ನಾಯಕರನ್ನು ಆಹ್ವಾನಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೂನ್ 23 ರಂದು ಪಾಟ್ನಾದಲ್ಲಿ ನಡೆಸಿದ ವಿರೋಧ ಪಕ್ಷದ ಸಭೆಯನ್ನು ವಿರೋಧ ಪಕ್ಷದ ನಾಯಕರಿಗೆ ಬರೆದ ಪತ್ರದಲ್ಲಿ ನೆನಪಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಸರ್ವಾನುಮತದ ಒಪ್ಪಂದಕ್ಕೆ ಬಂದಿದ್ದರಿಂದ ಸಭೆಯು ಉತ್ತಮ ಯಶಸ್ಸನ್ನು ಕಂಡಿದೆ ಎಂದು ತಿಳಿಸಿದ್ದಾರೆ.

ಜುಲೈ 17 ರಿಂದ 18 ರವರೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಪ್ರತಿಪಕ್ಷದ ಏಕತೆಯ ಸಭೆಯಲ್ಲಿ ಕನಿಷ್ಠ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧದ ಒಗ್ಗಟ್ಟನ್ನು ತೋರಿಸಿರುವ ವಿರೋಧ ಪಕ್ಷಗಳ ಪ್ರಯತ್ನಗಳಿಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ.

ನಾಳಿನ ಸಭೆಗೆ ಹೊಸದಾಗಿ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ), ಕೊಂಗು ದೇಸ ಮಕ್ಕಳ್ ಕಚ್ಚಿ (ಕೆಡಿಎಂಕೆ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಕೇರಳ ಕಾಂಗ್ರೆಸ್ (ಜೋಸೆಫ್), ಮತ್ತು ಕೇರಳ ಕಾಂಗ್ರೆಸ್ (ಮಣಿ) ಬೆಂಬಲ ನೀಡಿವೆ.

English summary

Bengaluru Opposition Meet: Aam Aadmi Party leaders will sunday meet to deliberate on participation in the Opposition meet in Bengaluru. know more.

Story first published: Sunday, July 16, 2023, 12:59 [IST]

Source link