Last Updated:
ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದ ಸಂದರ್ಭದಲ್ಲಿ, ನಟ ದರ್ಶನ್ ಪರವಾಗಿ ಇದುವರೆಗೆ ವಕಾಲತ್ತು ವಹಿಸಿಕೊಂಡಿದ್ದ ವಕೀಲ ಸುನೀಲ್ ಅವರು ನ್ಯಾಯಪೀಠದ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಟ್ರಯಲ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಆರಂಭವಾಗಿರುವ ನಡುವೆಯೇ, ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ನಟ ದರ್ಶನ್ (Actor Darshan) ಪರ ವಕೀಲರು ಸಲ್ಲಿಸಿದ ದಿಢೀರ್ ಮನವಿಯು ಹೊಸ ಚರ್ಚೆಗೆ ಕಾರಣವಾಗಿದೆ.
ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದ ಸಂದರ್ಭದಲ್ಲಿ, ನಟ ದರ್ಶನ್ ಪರವಾಗಿ ಇದುವರೆಗೆ ವಕಾಲತ್ತು ವಹಿಸಿಕೊಂಡಿದ್ದ ವಕೀಲ ಸುನೀಲ್ ಅವರು ನ್ಯಾಯಪೀಠದ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ.
ತಾವು ಕೆಳಹಂತದ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸುತ್ತಿರುವುದು ಸತ್ಯವಾದರೂ, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಈ ನಿರ್ದಿಷ್ಟ ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡನೆಯಿಂದ ನಿವೃತ್ತಿ ಬಯಸುತ್ತಿರುವುದಾಗಿ ಅವರು ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಟ್ಟದಲ್ಲಿ ವಾದ ಮಂಡಿಸಲು ತಮ್ಮ ಬಳಿ ದರ್ಶನ್ ಅವರಿಂದ ಯಾವುದೇ ಸ್ಪಷ್ಟ ಸೂಚನೆ ಅಥವಾ ಅಧಿಕೃತ ನಿರ್ದೇಶನ ಬಂದಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.
ದರ್ಶನ್ ಪರ ವಕೀಲರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.
ಇನ್ನು ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿ ಪೊಟ್ಟಣಗೆರೆ ಶೆಡ್ನಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ್ದ ದರ್ಶನ್ ಆ್ಯಂಡ್ ಗ್ಯಾಂಗ್ ಇದೀಗ ಜೈಲು ಸೇರಿದೆ. ದರ್ಶನ್ ಹಾಗೂ ಸಹಚರ ಏಟಿಗೆ ರೇಣುಕಾಸ್ವಾಮಿ ಜೀವ ಬಿಟ್ಟ ಎನ್ನುವ ಆರೋಪವಿದ್ದು, ಈ ಕೇಸ್ಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳೇ ಪ್ರಮುಖ ಸಾಕ್ಷ್ಯವಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಾಷಿಕ್ಯೂಷನ್ (ತನಿಖಾಧಿಕಾರಿಗಳು) ಸಲ್ಲಿಸಿರುವ ಸಿಸಿಟಿವಿ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಅನ್ನು ಸಾಕ್ಷ್ಯವಾಗಿ ನಗರದ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಪರಿಗಣಿಸಿದೆ ಎಂದು ಕನ್ನಡ ಪ್ರಭ ವರದಿ ಮಾಡಿದೆ.
Bangalore [Bangalore],Bangalore,Karnataka
Jun 18, 2026 11:18 PM IST













