Last Updated:
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ್ ತಂಡ 218ಕ್ಕೆ ಆಲೌಟ್ ಆಗಿತ್ತು. ಜೈಸ್ವಾಲ್ ಶತಕ ಹಾಗೂ ರೋಹಿತ್ ಶರ್ಮಾ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಕೇವಲ 28.4 ಓವರ್ಗಳಲ್ಲೇ ಗುರಿ ತಲುಪಿತು.
ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ಗಳ ಗೆಲುವು ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯನ್ನ ಕ್ಲೀನ್ ಸ್ವೀಪ್ ಸಾಧಿಸಿದೆ. ಈಗಾಗಲೇ ಸರಣಿ ಗೆದ್ದ ಭಾರತ ತಂಡಕ್ಕೆ ಈ ಪಂದ್ಯ ಕೇವಲ ಔಪಚಾರಿಕ ಪಂದ್ಯವಾಗಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಅಫ್ಘಾನಿಸ್ತಾನ ತಂಡ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. 44.2 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 218 ರನ್ಗಳಿಸಿತ್ತು. ಈ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ ಜೈಸ್ವಾಲ್ ಶತಕ ಹಾಗೂ ರೋಹಿತ್ ಶರ್ಮಾ ಸಿಡಿಸಿದ ಅರ್ಧಶತಕದ ನೆರವಿನಿಂದ ಕೇವಲ 28.4 ಓವರ್ಗಳಲ್ಲೇ ಗುರಿ ತಲುಪಿ ಏಕದಿನ ಸರಣಿಯನ್ನ 3-0ಯಿಂದ ಕ್ಲೀನ್ ಸ್ವೀಪ್ ಮಾಡಿತು.













