Last Updated:
ಸ್ಯಾಂಡಲ್ ವುಡ್ ನಟ ವಿನೋದ್ ಪ್ರಭಾಕರ್ (Vinod Prabhaka) ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಸ್ಯಾಂಡಲ್ ವುಡ್ ನಟ ವಿನೋದ್ ಪ್ರಭಾಕರ್ (Vinod Prabhaka) ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಮನೆಯಲ್ಲಿ ಇದ್ದ ವೇಳೆಯೇ ನಟ ವಿನೋದ್ ಪ್ರಭಾಕರ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ನಾಗರಭಾವಿಯ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಬೆಳಗ್ಗೆಯಿಂದಲೇ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಹಾಗೆಯೇ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇನ್ನು ಇತ್ತೀಚಿಗೆ ನಟ ವಿನೋದ್ ಪ್ರಭಾಕರ್ ತಮ್ಮ ಬಲರಾಮ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಹೀಗಿರುವಾಗ ಇದೀಗ ಇದ್ದಕಿದ್ದ ಹಾಗೆ ನಟನ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.
Bangalore [Bangalore],Bangalore,Karnataka













