Team India: ಕೊಹ್ಲಿ, ಬುಮ್ರಾ ಕಮ್​​ಬ್ಯಾಕ್, ಜೈಸ್ವಾಲ್​ ಔಟ್, ಜಡೇಜಾಗೆ ಶಾಕ್! ಇಂಗ್ಲೆಂಡ್ ಪ್ರವಾಸಕ್ಕೆ ಏಕದಿನ ತಂಡ ಪ್ರಕಟಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews

ಟೀಮ್ ಇಂಡಿಯಾ


Last Updated:

ಜುಲೈ 14 ರಿಂದ ಜುಲೈ 16ರವರೆಗೆ ನಡೆಯಲಿರುವ ಈ ಸರಣಿಗಾಗಿ ಬಿಸಿಸಿಐ ಹಲವು ಪ್ರಮುಖ ಬದಲಾವಣೆ ಮಾಡಿ ಘೋಷಿಸಿದೆ. ಸ್ಟಾರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಈ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

ಟೀಮ್ ಇಂಡಿಯಾ
ಟೀಮ್ ಇಂಡಿಯಾ

ಬಹುನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕಾಗಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡ ಪ್ರಕಟಿಸಿದೆ. ಟೀಮ್ ಇಂಡಿಯಾ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಜುಲೈ 14 ರಿಂದ ಜುಲೈ 16ರವರೆಗೆ ನಡೆಯಲಿರುವ ಈ ಸರಣಿಗಾಗಿ ಬಿಸಿಸಿಐ ಹಲವು ಪ್ರಮುಖ ಬದಲಾವಣೆ ಮಾಡಿ ಘೋಷಿಸಿದೆ. ಸ್ಟಾರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಈ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಇವರ ಜೊತೆಗೆ ಅಕ್ಷರ್ ಪಟೇಲ್ ಹಾಗೂ ಜಸ್​ಪ್ರಿತ್ ಬುಮ್ರಾ ಏಕದಿನ ತಂಡಕ್ಕೆ ಮರಳಿದ್ದಾರೆ.

ಜಡೇಜಾ ಏಕದಿನ ತಂಡದಿಂದ ಔಟ್

ಅಫ್ಘಾನಿಸ್ತಾನ ಸರಣಿ ವೇಳೆ ವಿಶ್ರಾಂತಿ ನೀಡಲಾಗಿದ್ದ ರವೀಂದ್ರ ಜಡೇಜಾರನ್ನ ಇಂಗ್ಲೆಂಡ್ ಪ್ರವಾಸದಿಂದಲೂ ಹೊರಗಿಡಲಾಗಿದೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದು ಟಾಪ್ ಆಲ್​ರೌಂಡರ್​ ಆಗಿ ಆಡಲಿದ್ದಾರೆ. ಗಾಯದಿಂದ ಹಾರ್ದಿಕ್ ಪಾಂಡ್ಯ ಕೂಡ ಪ್ರವಾಸದಿಂದ ಹೊರಬಿದ್ದಿದ್ದು, ನಿತೀಶ್ ಕುಮಾರ್ ರೆಡ್ಡಿ ವೇಗದ ಬೌಲಿಂಗ್ ಆಲ್​ರೌಂಡರ್​ ಆಗಿ ತಂಡದಲ್ಲಿ ಉಳಿದುಕೊಂಡಿದ್ದಾರೆ. ಹರ್ಷಿತ್ ರಾಣಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.

ಫಿಟ್​ನೆಸ್​​ ಕ್ಲಿಯರ್ ಮಾಡಿದ್ರೆ ಮಾತ್ರ ಕೊಹ್ಲಿ ಅವಕಾಶ

ಐಪಿಎಲ್ 2026ರ ಫೈನಲ್‌ನಲ್ಲಿ ಆರ್‌ಸಿಬಿಯನ್ನು ಗೆಲುವಿನತ್ತ ಕೊಂಡೊಯ್ದ ನಂತರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯನ್ನು ಮಿಸ್​ ಮಾಡಿಕೊಂಡಿದ್ದರು. ಇಂಗ್ಲೆಂಡ್ ಪ್ರವಾಸದಲ್ಲಿ ಆಡುವ ಮೊದಲು ವಿರಾಟ್ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.

ಜೈಸ್ವಾಲ್, ಸಿರಾಜ್​ ಔಟ್

ಅಫ್ಘಾನ್​ ಸರಣಿಯ ವೇಳೆ ಮೊಹಮ್ಮದ್ ಸಿರಾಜ್​ರನ್ನ ವರ್ಕ್​ ಲೋಡ್ ಮ್ಯಾನೇಜ್​ಮೆಂಟ್​ ಹೆಸರಿನಲ್ಲಿ ದಿಢೀರ್ ತಂಡದಿಂದ ಹೊರಗಿಡಲಾಗಿತ್ತು. ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಿ ಹರ್ಷಿತ್ ರಾಣಾರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಇಂಗ್ಲೆಂಡ್ ಪ್ರವಾಸಕ್ಕೂ ಅವರನ್ನ ಕಡೆಗಣಿಸಲಾಗಿದೆ. ಅಚ್ಚರಿಯ ವಿಷಯ ಎಂದರೆ ಅಫ್ಘಾನ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್​​​ರನ್ನ ಕೂಡ ತಂಡದಿಂದ ಕೈಬಿಡಲಾಗಿದೆ.

ನಿತೀಶ್ ಕುಮಾರ್ ರೆಡ್ಡಿ ಮತ್ತು ಹರ್ಷಿತ್ ರಾಣಾ ಅವರಿಗೆ ವೇಗದ ಬೌಲರ್-ಆಲ್ರೌಂಡರ್‌ಗಳಾಗಿ ಅವಕಾಶ ಸಿಕ್ಕಿದೆ. ರಾಹುಲ್ ಮತ್ತು ಇಶಾನ್ ವಿಕೆಟ್ ಕೀಪರ್ ಪಾತ್ರವನ್ನೂ ನಿರ್ವಹಿಸಲಿದ್ದಾರೆ. ಸ್ಪಿನ್ ಜವಾಬ್ದಾರಿ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಅವರ ಮೇಲಿರುತ್ತದೆ. ವೇಗದ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್ ಇದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೆ ಭಾರತದ 15 ಸದಸ್ಯರ ಏಕದಿನ ತಂಡ

ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

Team India: ಕೊಹ್ಲಿ, ಬುಮ್ರಾ ಕಮ್​​ಬ್ಯಾಕ್, ಜೈಸ್ವಾಲ್​ ಔಟ್, ಜಡೇಜಾಗೆ ಶಾಕ್! ಇಂಗ್ಲೆಂಡ್ ಪ್ರವಾಸಕ್ಕೆ ಏಕದಿನ ತಂಡ ಪ್ರಕಟಿಸಿದ ಬಿಸಿಸಿಐ



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed