Last Updated:
IMD ಮತ್ತು KSNDMC ಕರ್ನಾಟಕದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿಗೆ ಜೂನ್ 25 ರಿಂದ ಜುಲೈ 1 ರವರೆಗೆ ಭಾರಿ ಮಳೆಯ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆ ನೀಡಿವೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬೆಚ್ಚಿಬೀಳಿಸುವ ಮುನ್ಸೂಚನೆ ನೀಡಿದೆ. ಹೌದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜನತೆಗೆ ಮಳೆಯ ಭಾರಿ ಆತಂಕ ಎದುರಾಗಿದ್ದು, ಐಎಂಡಿ ಇದೀಗ ಡೇಂಜರಸ್ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 29 ರಿಂದ ಜುಲೈ 1 ರವರೆಗೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 29 ಮತ್ತು 30 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಎಂಎಂ ನಿಂದ 115.4 ಎಂಎಂ ವರೆಗೆ ಭಾರಿ ಮಳೆಯಾಗಲಿದ್ದು, 115.5 ಎಂಎಂ ನಿಂದ 204.4 ಎಂಎಂ ವರೆಗೆ ಅತಿ ಭಾರಿ ಮಳೆಯಾಗುವ ಕಠಿಣ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನವೇ ಜನರು ಈ ಬಗ್ಗೆ ತೀವ್ರ ಎಚ್ಚರಿಕೆ ವಹಿಸುವಂತೆ ಇಲಾಖೆ ಕಟ್ಟುನಿಟ್ಟಾಗಿ ಕೋರಿದೆ.
ಇದರ ಜೊತೆಗೆ ಇನ್ನೊಂದು ಶಾಕಿಂಗ್ ಅಪ್ಡೇಟ್ ಎಂದರೆ, ರಾಜ್ಯದ ಹಲವು ಭಾಗಗಳಿಗೆ ಮಳೆಯ ‘ಯೆಲ್ಲೋ ಅಲರ್ಟ್’ ಅನ್ನು ಕೂಡ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ರಿಂದ 28 ರವರೆಗೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 1 ರಂದು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 29 ರಿಂದ ಜುಲೈ 1 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಗರಿಷ್ಠ 115.4 ಎಂಎಂ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತನ್ನ ಯೆಲ್ಲೋ ಅಲರ್ಟ್ ವರದಿಯಲ್ಲಿ ಸ್ಪಷ್ಟಪಡಿಸಿದ್ದು, ಇಲ್ಲಿಯೂ ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಇಡೀ ಅರ್ಧ ಕರ್ನಾಟಕಕ್ಕೆ ಮಳೆ ಇಂದೇ ಬರುತ್ತಾ?
ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಯೂ 30-40 kmph ವೇಗದ ತಡೆರಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್ಎನ್ಡಿಎಂಸಿ ಎಚ್ಚರಿಸಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಮುನ್ಸೂಚನೆಯ ವರದಿ ಲಭ್ಯವಾಗಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರದ ಮುಂದಿನ 24 ಗಂಟೆಗಳ ವಾತಾವರಣ ನೋಡುವುದಾದರೆ, ಆಕಾಶವು ಸಾಮಾನ್ಯವಾಗಿ ಮೋಡಕವಿದಿರಲಿದ್ದು, ನಗರದ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ದತ್ತಾಂಶವನ್ನು ಇಲಾಖೆ ಬಿಡುಗಡೆ ಮಾಡಿದೆ.
Bangalore [Bangalore],Bangalore,Karnataka













