Last Updated:
ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿ ಮೊದಲ ಪಂದ್ಯ ಬೆಲ್‌ಫಾಸ್ಟ್‌ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಇಂದು ಐರ್ಲೆಂಡ್ (India vs Ierland) ವಿರುದ್ಧ ಹೊಸ ಯುಗವನ್ನು ಆರಂಭಿಸುತ್ತಿದೆ. ವಿಶ್ವ ಚಾಂಪಿಯನ್ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ನಿರ್ಗಮನದ ನಂತರ ಭಾರತ ತಂಡವು ತನ್ನ ಮೊದಲ ಟಿ20 ಸರಣಿಯನ್ನು ಆಡುತ್ತಿದೆ. ಎರಡು ಪಂದ್ಯಗಳ ಸರಣಿಯ ಮೊದಲ ಪಂದ್ಯ ಬೆಲ್‌ಫಾಸ್ಟ್‌ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗಾಯದಿಂದ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಹರ್ಷಿತ್ ರಾಣಾ ತಂಡಕ್ಕೆ ಮರಳಿದ್ದಾರೆ. ಪ್ರಸಿದ್ಧ್ ಕೃಷ್ಣ ಕೂಡ ಟಿ20 ತಂಡಕ್ಕೆ ವಾಪಾಸ್ ಆಗಿದ್ದಾರೆ. ಇಂದಿನ ಪಂದ್ಯದಲ್ಲಿ ಹೊಸಬರಿಗೆ ಒಬ್ಬರಿಗೂ ಪದಾರ್ಪಣೆ ಅವಕಾಶ ಸಿಕ್ಕಿಲ್ಲ.
ಆದರೆ ಐರ್ಲೆಂಡ್ ಪರ ಭಾರತೀಯ ಮೂಲದ ಜೈ ಮುಂದ್ರಾ ಐರಿಷ್ ಕ್ಯಾಪ್ ಪಡೆದುಕೊಂಡಿದ್ದಾರೆ. ಅವರೊಂದಿಗೆ ಮ್ಯಾಥ್ಯೂ ಹೊಲಾರ್ಡ್ ಕೂಡ ಮೊದಲ ಪಂದ್ಯ ಆಡುವ ಅವಕಾಶ ಪಡೆದಿದ್ದಾರೆ.
ಭಾರತ ಮತ್ತು ಐರ್ಲೆಂಡ್ ತಂಡಗಳು ಇಲ್ಲಿಯವರೆಗೆ 8 ಟಿ20 ಪಂದ್ಯಗಳನ್ನಾಡಿದ್ದು, ಭಾರತ ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿ ಪ್ರಾಬಲ್ಯ ಸಾಧಿಸಿದೆ.
ಐರ್ಲೆಂಡ್ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ,ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್
ಐರ್ಲೆಂಡ್ ಪ್ಲೇಯಿಂಗ್ XI: ಟಿಮ್ ಹೀಟ್ಲಿ ಟೆಕ್ಟರ್, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕ್ಕರ್ (ನಾಯಕ & ವಿಕೀ), ಬೆಂಜಮಿನ್ ಕ್ಯಾಲಿಟ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಲಿಯಾಮ್ ಮೆಕಾರ್ಥಿ, ಮ್ಯಾಥ್ಯೂ ಹಂಫ್ರೀಸ್, ಜೈ ಮುಂದ್ರಾ, ಮ್ಯಾಟ್ ಹೊಲ್ಲಾರ್ಡ್.
IND vs IRL: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ! ಕೃಷ್ಣ, ರಾಣಾ ಕಮ್ ಬ್ಯಾಕ್, ವೈಭವ್ಗೆ ಸಿಗದ ಅವಕಾಶ, ಪ್ಲೇಯಿಂಗ್ XI ಹೀಗಿದೆ













