ಕಲಘಟಗಿ: ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ | Lack of drinking water in government schools of Kalaghatgi taluk

Dharwad

lekhaka-Sandesh R Pawar

By ಧಾರವಾಡ ಪ್ರತಿನಿಧಿ

|

Google Oneindia Kannada News

ಕಲಘಟಗಿ, ಜೂನ್‌, 23: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದೆ. ಅಂತದರಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ.

ಕಲಘಟಗಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಲ್ಲದೆ ಮಕ್ಕಳು ಪ್ರತಿನಿತ್ಯ ಪರದಾಡುವಂತಹ ಪರಿಸ್ಥಿನಿ ನಿರ್ಮಾಣ ಆಗಿದೆ. ಕಲಘಟಗಿ ಪಟ್ಣದಲ್ಲಿರುವ ಶಾಸಕರ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆ, ಬಾಲಕೀಯರ ಸರ್ಕಾರಿ ಪ್ರೌಢಶಾಲೆ ಮತ್ತು ಸಕಾರ್ರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 1 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಕಳೆದ ನಾಲ್ಕೈದು ತಿಂಗಳುಗಳಿಂದಲೂ ಇಲ್ಲಿನ ಶಾಲಾ ಮಕ್ಕಳಿಗೆ ಸಮರ್ಪಕವಾಗಿ ಕುಡಿಯಲು ನೀರಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Lack of drinking water

ಇನ್ನು ಈ ಶಾಲೆಗಳಲ್ಲಿ ಸುಮಾರು ಎರಡರಿಂದ ಮೂರು ನೀರಿನ ಟ್ಯಾಂಕರ್‌ಗಳಿದ್ದು, ಪಟ್ಟಣ ಪಂಚಾಯಿತಿ ನಳದಲ್ಲಿನ ನೀರನ್ನು ಸಂಗ್ರಹಿಸಿ ಇಡಲಾಗುತ್ತದೆ. ಆದರೆ ಶಾಲಾ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದ್ದು, ಒಂದೆರೆಡು ದಿನಗಳಲ್ಲಿ ನೀರು ಖಾಲಿಯಾಗಿದೆ. ಪರಿಣಾಮ ಊಟ ಮಾಡಿದ ಮಕ್ಕಳಿಗೆ ಕುಡಿಯಲು ಸಹ ನೀರಿಲ್ಲದೆ ಮನೆಯಿಂದಲೇ ನೀರು ತರುವಂತಹ ಸ್ಥಿತಿ ಬಂದೊದಗಿದೆ.

ಬೆಳಗಾವಿ; ಖಾಸಗಿ ಬೋರ್‌ವೆಲ್ ಬಾಡಿಗೆಗೆ, ಟ್ಯಾಂಕರ್‌ ಮೂಲಕ ನೀರು ಪೂರೈಕೆ ಬೆಳಗಾವಿ; ಖಾಸಗಿ ಬೋರ್‌ವೆಲ್ ಬಾಡಿಗೆಗೆ, ಟ್ಯಾಂಕರ್‌ ಮೂಲಕ ನೀರು ಪೂರೈಕೆ

ಒಂದೊಂದು ದಿನ ನೀರು ಬರದೆ ಶೌಚಾಲಯಕ್ಕೂ ನೀರಿಲ್ಲದೆ ಮಕ್ಕಳು ಪರದಾಡುವಂತಾಗಿದೆ. ಇನ್ನು ಶಾಸಕರ ಮಾದರಿ ಶಾಲಾ ಆವರಣದಲ್ಲಿ ಕೊಳವೆ ಭಾವಿಯನ್ನು ಕೊರೆಸಿ 6 ತಿಂಗಳು ಕಳೆದರೂ ಅದಕ್ಕೆ ವಿದ್ಯುತ್ ಹಾಗೂ ಪೈಪ್‍ಲೈನ್ ಸಂಪರ್ಕವನ್ನೂ ಕಲ್ಪಿಸಿಲ್ಲ. ಈ ಕನೆಕ್ಷನ್ ಕೊಟ್ಟರೆ ತಕ್ಕ ಮಟ್ಟಿಗೆ ನೀರಿನ ಸಮಸ್ಯೆ ಬಗೆಹರಿಸಿದಂತಾಗುತ್ತದೆ ಎಂದು ಪೋಷಕರು ಹಾಗೂ ಶಾಲಾ ಮಕ್ಕಳು ಅಳಲು ತೋಡಿಕೊಂಡಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಮಕ್ಕಳಿಗೆ ನೀರಿನ ಭಾಗ್ಯ ಒದಗಿಸಿಬೇಕಾಗಿದೆ. ಅಷ್ಟೇ ಅಲ್ಲದೆ ಕಲಘಟಗಿ ಕ್ಷೇತ್ರದ ಸಚಿವರಾದ ಸಂತೋಷ್‌ ಲಾಡ್ ಅವರು ಈ ಮಕ್ಕಳ ಭವಿಷ್ಯವನ್ನು ಗಮನಿಸುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.

English summary

Lack of drinking water in government schools of Kalaghatgi taluk, Dharwad district

Story first published: Friday, June 23, 2023, 14:19 [IST]

Source link