Last Updated:
ಕೆಜಿಎಫ್ , ಕಾಂತಾರ ಮತ್ತು ಸಲಾರ್ನಂತಹ ಬ್ಲಾಕ್ಬಸ್ಟರ್ ಸಿನಿಮಾಗಳನ್ನು ನಿರ್ಮಿಸಿ ದೇಶಾದ್ಯಂತ ಖ್ಯಾತಿ ಗಳಿಸಿರುವ ಹೊಂಬಾಳೆ ಫಿಲ್ಮ್ಸ್ (Hombale Films) ಇದೀಗ ಕಾಲಿವುಡ್ ಸ್ಟಾರ್ ಸೂರ್ಯ ಅವರೊಂದಿಗೆ ಕೈಜೋಡಿಸಿದೆ.
ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಕೆಜಿಎಫ್ (KGF), ಕಾಂತಾರ (Kantara) ಮತ್ತು ಸಲಾರ್ನಂತಹ (Salaar) ಬ್ಲಾಕ್ಬಸ್ಟರ್ ಸಿನಿಮಾಗಳನ್ನು ನಿರ್ಮಿಸಿ ದೇಶಾದ್ಯಂತ ಖ್ಯಾತಿ ಗಳಿಸಿರುವ ಹೊಂಬಾಳೆ ಫಿಲ್ಮ್ಸ್ (Hombale Films) ಇದೀಗ ಕಾಲಿವುಡ್ ಸ್ಟಾರ್ ಸೂರ್ಯ (Suriya) ಅವರೊಂದಿಗೆ ಕೈಜೋಡಿಸಿದೆ. ಈ ಹೊಸ ಸಿನಿಮಾ ಘೋಷಣೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.
ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ತನ್ನ ಮುಂದಿನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದೆ. ಕನ್ನಡ ಚಿತ್ರರಂಗದಿಂದ ಆರಂಭವಾಗಿ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿರುವ ಈ ಸಂಸ್ಥೆ, ಈಗ ಮತ್ತೊಮ್ಮೆ ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ಮಿಸಲು ಸಜ್ಜಾಗಿದೆ.
The next chapter… #SuriyaXHombale
He built it.
Frame by frame. Film by film. Fight by fight.Roles that bled truth.
Characters that carried the weight of real lives.
A journey defined by courage, conviction, and craft.Three decades of truth on screen.
Countless hearts… pic.twitter.com/HoZOgQRbC7— Hombale Films (@hombalefilms) June 29, 2026
ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಈ ಹೊಸ ಪ್ರಾಜೆಕ್ಟ್ನ್ನು ಘೋಷಿಸಿದ್ದು, ಸೂರ್ಯ ಅವರೊಂದಿಗೆ ಮೊದಲ ಬಾರಿಗೆ ಸಿನಿಮಾ ನಿರ್ಮಿಸುತ್ತಿರುವುದಾಗಿ ತಿಳಿಸಿದೆ.
ನಟ ಸೂರ್ಯ
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಜೈ ಭೀಮ್ ಚಿತ್ರದ ನಂತರ ನಟ ಸೂರ್ಯ ಮತ್ತು ನಿರ್ದೇಶಕ ಟಿ.ಜೆ. ಜ್ಞಾನವೇಲ್ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಈಗ ಇದೇ ಯಶಸ್ವಿ ಜೋಡಿ ಮತ್ತೊಂದು ಹೊಸ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದು, ಚಿತ್ರದ ಬಗ್ಗೆ ಸಿನಿಪ್ರಿಯರಲ್ಲಿ ಈಗಾಗಲೇ ಭಾರೀ ನಿರೀಕ್ಷೆ ಮೂಡಿದೆ.
ಇನ್ನು ಚಿತ್ರ ಘೋಷಣೆಯೊಂದಿಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಶೇಷ ಸಂದೇಶವನ್ನೂ ಹಂಚಿಕೊಂಡಿದೆ. ದಿ ನೆಕ್ಸ್ಟ್ ಚಾಪ್ಟರ್ ಎಂಬ ಅಭಿಯಾನದೊಂದಿಗೆ ಪ್ರಕಟಿಸಿದ ಪೋಸ್ಟ್ನಲ್ಲಿ, ಕಳೆದ ಮೂರು ದಶಕಗಳಿಂದ ಸತ್ಯಕ್ಕೆ ಹತ್ತಿರವಾದ ಪಾತ್ರಗಳು, ನೈಜ ಬದುಕಿನ ತೂಕವನ್ನು ಹೊತ್ತ ಅಭಿನಯ ಮತ್ತು ಅದ್ಭುತ ಕಲಾತ್ಮಕ ಪ್ರದರ್ಶನದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಸ್ಸು ಗೆದ್ದಿರುವ ಈ ತಲೆಮಾರಿನ ಅತ್ಯಂತ ನಿರ್ಭೀತ ನಟ ಸೂರ್ಯ ಅವರನ್ನು ತಮ್ಮ ಸಂಸ್ಥೆಗೆ ಸ್ವಾಗತಿಸುತ್ತಿರುವುದಾಗಿ ತಿಳಿಸಿದೆ.
ಹೊಂಬಾಳೆ ಫಿಲ್ಮ್ಸ್ ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸರಣಿ, ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ಅಭಿನಯದ ಕಾಂತಾರ, ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಸಲಾರ್ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನು ನಿರ್ಮಿಸಿ ಸಂಸ್ಥೆ ದೇಶಾದ್ಯಂತ ಯಶಸ್ಸು ಕಂಡಿದೆ.
Bangalore [Bangalore],Bangalore,Karnataka













