ದಲಿತರ ಮನೆ ಧ್ವಂಸ: ಬಿಜೆಪಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ | Priyanka Gandhi reaction on Madhya Pradesh Dalit homes Demolition

India

oi-Mamatha M

|

Google Oneindia Kannada News

ಭೋಪಾಲ್, ಜೂನ್. 23: ದಲಿತರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಮುದಾಯದ ಮೇಲಿನ ದೌರ್ಜನ್ಯಗಳು ದಿನೇ ದಿನೇ ಉತ್ತುಂಗಕ್ಕೇರಿವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.

”ಕೂಲಿ ಕೆಲಸಕ್ಕೆ ಹೋಗಿದ್ದ ಕುಟುಂಬಗಳಿಗೆ ಯಾವುದೇ ಮಾಹಿತಿ ನೀಡದೆ ಮನೆಗಳನ್ನು ನೆಲಸಮ ಮಾಡಲಾಗಿದೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿದ್ದ ಮನೆಗಳನ್ನೂ ನೆಲಸಮ ಮಾಡಲಾಗಿದೆ. ದಲಿತರು, ಆದಿವಾಸಿಗಳು ಮತ್ತು ಬಡವರ ಮೇಲೆ ದೌರ್ಜನ್ಯ ನಡೆಸಿದ ಬಿಜೆಪಿ ಸರ್ಕಾರಕ್ಕೆ ಮಧ್ಯಪ್ರದೇಶದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Priyanka Gandhi reaction on Madhya Pradesh Dalit homes Demolition

ಗುರುವಾರ ಮಧ್ಯಪ್ರದೇಶದ ಆಡಳಿತವು ಸಾಗರ್ ಜಿಲ್ಲೆಯಲ್ಲಿ 10 ಮನೆಗಳನ್ನು ನೆಲಸಮಗೊಳಿಸಿದೆ. ಈ ಪೈಕಿ ಏಳು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯೋಜನೆಯಡಿ ನಿರ್ಮಿಸಲಾಗಿದೆ. ಅರಣ್ಯ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ರಾಜ್ಯ ಆಡಳಿತ ಹೇಳಿಕೊಂಡಿದೆ.

ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಶುಕ್ರವಾರ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಅವರ ಪ್ರತಿಭಟನೆಯು ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ ಮತ್ತು ಎಸ್ಪಿ ಅಭಿಷೇಕ್ ತಿವಾರಿ ಇತರ ಅಧಿಕಾರಿಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು.

ವಿಪಕ್ಷಗಳ ಪಾಟ್ನಾ ಸಭೆ ಯಶಸ್ಸು, ಶಿಮ್ಲಾದಲ್ಲಿ ಮತ್ತೊಂದು ಸಭೆಗೆ ಪಕ್ಷಗಳ ತಯಾರಿ!: ಯಾವಾಗ ತಿಳಿಯಿರಿವಿಪಕ್ಷಗಳ ಪಾಟ್ನಾ ಸಭೆ ಯಶಸ್ಸು, ಶಿಮ್ಲಾದಲ್ಲಿ ಮತ್ತೊಂದು ಸಭೆಗೆ ಪಕ್ಷಗಳ ತಯಾರಿ!: ಯಾವಾಗ ತಿಳಿಯಿರಿ

ಬುಧವಾರ ರಾತ್ರಿ 10.30ರ ಸುಮಾರಿಗೆ ಸಾಗರ್ ಜಿಲ್ಲೆಯಲ್ಲಿ ರಾಪುರ ಗ್ರಾಮದಲ್ಲಿ ಪೊಲೀಸ್ ರಕ್ಷಣೆಯಲ್ಲಿ ಬುಲ್ಡೋಜರ್‌ಗಳ ಸಹಾಯದಿಂದ ಆದಿವಾಸಿಗಳು ಮತ್ತು ಇತರರ ಮನೆಗಳನ್ನು ನೆಲಸಮ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಈ ಮನೆಗಳನ್ನು ಯಾವ ಕಾನೂನಿನ ಅಡಿಯಲ್ಲಿ ಕೆಡವಲಾಯಿತು ಎಂದು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡುವಾಗ ಪ್ರಶ್ನಿಸಿದ್ದಾರೆ.

ಇದೇ ವೇಳೆ ಬಿಎಸ್‌ಪಿ ವರಿಷ್ಠೆ ಮಾಯಾವತಿ ಕೂಡ ದಲಿತರ ಮೇಲಿನ ಕ್ರಮವನ್ನು ಖಂಡಿಸಿದ್ದಾರೆ. “ಮಧ್ಯಪ್ರದೇಶದ ಬುಲ್ಡೋಜರ್ ರಾಜಕೀಯವು ಈಗ ಮನೆ ಮತ್ತು ಶಾಲೆಗಳನ್ನು ಗುರಿಯಾಗಿಸಲು ಪ್ರಾರಂಭಿಸಿದೆ. ಈಗ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಬಡವರ ಮನೆಗಳನ್ನು ಕೆಡವಲು ಪ್ರಾರಂಭಿಸಿದ್ದಾರೆ, ಇದು ಅತ್ಯಂತ ಖಂಡನೀಯ” ಎಂದಿದ್ದಾರೆ.

ಸಾಗರ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಯೋಜನೆಯಡಿ ನಿರ್ಮಿಸಲಾದ ಏಳು ದಲಿತ ಕುಟುಂಬಗಳ ಮನೆಗಳನ್ನು ನಾಶಪಡಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ.

English summary

Dalit homes Demolition in Madhya Pradesh: Congress general secretary Priyanka Gandhi hit out at BJP saying people will teach BJP a lesson. know more.

Story first published: Friday, June 23, 2023, 21:37 [IST]

Source link