Accident: ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬಸ್​, ಐವರು ದುರ್ಮರಣ, ಹಲವರಿಗೆ ಗಾಯ / Speeding Bus Hits Car: Tragic Crash Leaves 5 Dead, Several Injured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬಸ್​


Last Updated:

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬಸ್​
ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬಸ್​

ವೇಗವಾಗಿ ಬಂದ ಬಸ್ ಕಾರಿಗೆ ಡಿಕ್ಕಿ (Bus Car Accident) ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ (Uttar Pradesh) ಉನ್ನಾವ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಈ ಭಯಾನಕ ಅಪಘಾತ (Accident) ಸಂಭವಿಸಿದೆ. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ನಂತರ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಬಸ್‌ನಲ್ಲಿದ್ದ 5 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತವು ಬಂಗರ್ಮೌ ಪೊಲೀಸ್ ಠಾಣೆ ವ್ಯಾಪ್ತಿಯ 230.800 ಕಿ.ಮೀ. ಬಳಿ ನಡೆದಿದೆ. ವೇಗವಾಗಿ ಬಂದ ಬಸ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಬಸ್​ – ಕಾರಿಗೆ ಡಿಕ್ಕಿ, ಐವರು ಸಾವು

ಹೌದು, ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದ ಬಸ್ (BR06 PF 1024) ಚಾಲಕನ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇಯಿಂದ ಜಾರಿ ಪಕ್ಕದ ರಸ್ತೆಯಲ್ಲಿ ಲಕ್ನೋದಿಂದ ಆಗ್ರಾಕ್ಕೆ ಹೋಗುತ್ತಿದ್ದ ಕಾರ್ (UP58 AK 3461)ಗೆ ಬಸ್ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಐವರು ಮೃತ ಪಟ್ಟಿದ್ದಾರೆ. ದಿವ್ಯಾ (6 ವರ್ಷ), ಅಂಜು (40 ವರ್ಷ), ಅಮೃತ (13 ವರ್ಷ), ಧುನ್ಮುನ್ (60 ವರ್ಷ), ವಿನೋದ್ (45 ವರ್ಷ) ಮೃತಪಟ್ಟಿದ್ದಾರೆ.

ರಕ್ಷಣಾ ಕಾರ್ಯಾಚರಣೆ!

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬಂಗರ್ಮೌ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತರ ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಷಾದ

ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮತ್ತು ಮೃತರ ಕುಟುಂಬಗಳಿಗೆ ಎಲ್ಲಾ ಸಹಾಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಪೊಲೀಸರು ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ. ಬಸ್ ಚಾಲಕನ ನಿದ್ರೆಗೆ ಜಾರಿದ್ದು ಮುಖ್ಯ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಸಂಪೂರ್ಣ ತನಿಖೆ ನಡೆಸಿ ವಿವರವಾದ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಅಪಘಾತದ ನಂತರ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು. ಪೊಲೀಸರು ಸ್ಥಳದಿಂದ ಹಾನಿಗೊಳಗಾದ ವಾಹನಗಳನ್ನು ತೆಗೆದುಹಾಕಿದ ನಂತರ ಸಂಚಾರ ಸಾಮಾನ್ಯಗೊಂಡಿದೆ. ಈ ಭೀಕರ ಅಪಘಾತ ರಸ್ತೆ ಸುರಕ್ಷತೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಚಾಲಕರು ದೀರ್ಘ ಪ್ರಯಾಣದ ಸಮಯದಲ್ಲಿ ವಿಶ್ರಾಂತಿ ಪಡೆಯುವುದು ಮತ್ತು ವೇಗ ನಿಯಂತ್ರಣ ಮಾಡುವುದು ಅಗತ್ಯ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಮತ್ತು ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed