Ram Mandir: ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಮನೆಯಲ್ಲಿ ಸಿಕ್ಕ ಹಣವೆಷ್ಟು? ಬಂಧಿತರ ಮನೆಯಲ್ಲಿ ದೊರೆತ ಹಣದ ವಿವರ ಇಲ್ಲಿದೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

Ram Mandir: ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಮನೆಯಲ್ಲಿ ಸಿಕ್ಕ ಹಣವೆಷ್ಟು? ಬಂಧಿತರ ಮನೆಯಲ್ಲಿ ದೊರೆತ ಹಣದ ವಿವರ ಇಲ್ಲಿದೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ


ನ್ಯಾಯಾಂಗ ಬಂಧನದಲ್ಲಿ 8 ಆರೋಪಿಗಳು

ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿದ್ದ ದೇಣಿಗೆ ಹಣ ಮತ್ತು ಚಿನ್ನ, ಬೆಳ್ಳಿ ವಸ್ತುಗಳ ದುರುಪಯೋಗವು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಗರಣದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಅದರ ಸದಸ್ಯ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಚಂಪತ್ ರಾಯ್ ಅವರ ಮಾಜಿ ಚಾಲಕ ಸೇರಿದಂತೆ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ 8 ಜನರನ್ನು ಕಳೆದ ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣದ ಎಲ್ಲಾ 8 ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.

ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಎರಡು ದಿನಗಳ ನಂತರ ಎಸ್​ಐಟಿ ತಂಡ ಆರೋಪಿಗಳ ಮನೆಗೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 79 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದರು. ಇದೀಗ ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬುದರ ಮಾಹಿತಿ ಹೊರಬಿದ್ದಿದೆ.

ಯಾರ ಮನೆಯಲ್ಲಿ ಎಷ್ಟು ಸಿಕ್ಕಿದೆ?

1)ಲವ ಕುಶ್ ಮಿಶ್ರಾ ಮನೆಯಿಂದ 14,25,000 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

2) ಅನುಕಲ್ಪ ಮನೆಯಿಂದ 16,82,046 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

3) ಅವಿನಾಶ್ ಶುಕ್ಲಾರಿಂದ 20,39,220 ರೂ. ಮತ್ತು 1121 ಅಮೆರಿಕನ್ ಡಾಲರ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

4) ಕರುಣೇಶ್ ಪಾಂಡೆ ಮನೆಯಿಂದ 18,7063 ರೂ.

5) ರಾಮಶಂಕರ್ ಮಿಶ್ರಾ ಮನೆಯಿಂದ 7,32,170 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

6) ರಾಮಶಂಕರ್ ಯಾದವ್ ಅಲಿಯಾಸ್ ಟಿಲ್ಲು ಮನೆಯಿಂದ ಕೇವಲ 1 ಲಕ್ಷ ರೂಪಾಯಿ ಮತ್ತು ಸುಮಾರು 11 ಗ್ರಾಂ ಚಿನ್ನ ಮತ್ತು ಸುಮಾರು 375 ಗ್ರಾಂ ಬೆಳ್ಳಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಕೆಲವು ಆರೋಪಿಗಳ ಮನೆಯಿಂದ ಹೂಡಿಕೆ ದಾಖಲೆಗಳು ಮತ್ತು ದುಬಾರಿ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯೂಸ್​ 18 ಹಿಂದಿ ವರದಿ ಮಾಡಿದೆ.

ತಮ್ಮ ಆಪ್ತರೊಂದಿಗೆ ಚರ್ಚಿಸಿದ ಚಂಪತ್ ರೈ

ಅಯೋಧ್ಯಾ ರಾಮ ಮಂದಿರದಲ್ಲಿ ಕಳ್ಳತನ ಪ್ರಕರಣದ ಮಧ್ಯೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಮ್ಮ ಕೆಲವು ಆಪ್ತರೊಂದಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ಮೂಲಗಳ ಪ್ರಕಾರ, ಚರ್ಚೆಯ ಸಮಯದಲ್ಲಿ, ಅಯೋಧ್ಯೆಯಲ್ಲಿ ತಮ್ಮ ಸೇವೆ ಪೂರ್ಣಗೊಂಡಿದೆ ಎಂದು ಚಂಪತ್ ರೈ ಹೇಳಿದ್ದಾರೆ. ಯಾವುದೇ ಕಳಂಕದೊಂದಿಗೆ ತಾವು ಹಿಂತಿರುಗುವುದಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed