Sports
oi-Naveen Kumar N
ಮಹತ್ವದ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಜುಲೈ-ಆಗಸ್ಟ್‌ನಲ್ಲಿ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, 2 ಟೆಸ್ಟ್, ಮೂರು ಏಕದಿನ, 5 ಟಿ20 ಪಂದ್ಯಗಳ ಸರಣಿಯಲ್ಲಿ ಆಡಲಿದೆ.
ಜುಲೈ 12ರಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಬಾರಿ ಭಾರತ ತಂಡದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಶಮಿ, ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದ್ದು, ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ನವದೀಪ್ ಸೈನಿ ಅವರಿಗೆ ಅವಕಾಶ ನೀಡಲಾಗಿದೆ.
ಇನ್ನು ಭಾರತದ ಅನುಭವಿ ಆಟಗಾರರಾದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ಅವರು ತಂಡಕ್ಕೆ ವಾಪಸಾತಿ ಮಾಡಲು ಇನ್ನೂ ಕಾಲಾವಕಾಶ ತೆಗೆದುಕೊಳ್ಳಲಿದೆ. ರೋಹಿತ್ ಶರ್ಮಾ ಏಕದಿನ ಮತ್ತು ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಏಕದಿನ ತಂಡಕ್ಕೆ ಮರಳಿದ ಸಂಜು ಸ್ಯಾಮ್ಸನ್
ಇನ್ನು ಭಾರತ ಏಕದಿನ ತಂಡಕ್ಕೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ವಾಪಸಾತಿ ಮಾಡಿದ್ದಾರೆ. ಯುಜುವೇಂದ್ರ ಚಹಾಲ್, ಮುಖೇಶ್ ಕುಮಾರ್, ರುತುರಾಜ್ ಗಾಯಕ್ವಾಡ್, ಜಯದೇವ್ ಉನದ್ಕತ್ ಆಯ್ಕೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಉಮ್ರಾನ್ ಮಲಿಕ್ ಕೂಡ ತಂಡಕ್ಕೆ ವಾಪಸಾತಿ ಮಾಡಿದ್ದಾರೆ.
ಏಕದಿನ ಮತ್ತು ಟೆಸ್ಟ್ ಸರಣಿಗೆ ಭಾರತ ತಂಡ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
English summary
India Squad announced For West Indies Tour. Yashasvi Jaiswal and Ruturaj Gaikwad earn maiden India Test squad call-up for West Indies tour; Pujara and Shami miss out. Rahane named vice-captain, Saini returns.
Story first published: Friday, June 23, 2023, 15:34 [IST]