“ಭಾರತದ ಫುಟ್ಬಾಲ್ ಅಭಿಮಾನಿಗಳಿಗೆ ಶುಭಸುದ್ದಿ. ಮುಂಬರುವ ಏಷ್ಯನ್ ಗೇಮ್ಸ್ನಲ್ಲಿ ನಮ್ಮ ರಾಷ್ಟ್ರೀಯ ಫುಟ್ಬಾಲ್ ತಂಡಗಳು ಭಾಗವಹಿಸಲು ಸಜ್ಜಾಗಿವೆ. ಪುರುಷರ ಮತ್ತು ಮಹಿಳೆಯರ ಎರಡೂ ತಂಡಗಳು ಭಾಗವಹಿಸಲಿವೆ. ಭಾರತ ಸರ್ಕಾರದ ಕ್ರೀಡಾ ಸಚಿವಾಲಯವು ಭಾಗವಹಿಸಲು ಅನುಕೂಲವಾಗುವಂತೆ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಮಾನದಂಡದ ಪ್ರಕಾರ, ತಂಡ ಭಾಗವಹಿಸಲಲು ಅವಕಾಶ ಇರಲಿಲ್ಲ. ಉಭಯ ತಂಡಗಳು ಇತ್ತೀಚಿನ ಪ್ರದರ್ಶನಗಳನ್ನು ಗಮನದಲ್ಲಿಟ್ಟುಕೊಂಡು, ಈ ಮಾನದಂಡಗಳನ್ನು ಸಡಿಲಿಸಲು ಸಚಿವಾಲಯ ನಿರ್ಧರಿಸಿದೆ. ಹೀಗಾಗಿ ಅವರು ಏಷ್ಯನ್ ಗೇಮ್ಸ್ನಲ್ಲಿ ಅತ್ಯುತ್ತಮ ಪದರ್ಶನ ನೀಡಿ ನಮ್ಮ ದೇಶ ಹೆಮ್ಮೆಪಡುವಂತೆ ಮಾಡುತ್ತಾರೆ ಎಂಬ ಭರವಸೆ ನನಗಿದೆ” ಎಂದು ಟ್ವೀಟ್ ಮಾಡಿದ್ದಾರೆ.