ಚಿತ್ರದುರ್ಗದಲ್ಲಿ ಕಣ್ಣಿನ ಸೋಂಕು ಹೆಚ್ಚಳ: ವೇಗವಾಗಿ ಹರಡುವ ವೈರಾಣುವಿಗೆ ಮುಂಜಾಗ್ರತೆಯೇ ಮದ್ದು | Madras Eye Disease Cases Increases In Chitradurga

Chitradurga

lekhaka-Chidananda M

By ಚಿತ್ರದುರ್ಗ ಪ್ರತಿನಿಧಿ

|

Google Oneindia Kannada News

ಚಿತ್ರದುರ್ಗ, ಜುಲೈ 27: ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು ಹಾಗೂ ಮಕ್ಕಳಲ್ಲಿ ಕಣ್ಣಿನ ಸೋಂಕು (ಕಂಜಂಕ್ಟಿವೈಟಿಸ್) ಅಥವಾ ಮದ್ರಾಸ್ ಐ ವೈರಾಣು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.

ಶಾಲಾ ಮಕ್ಕಳು ಮತ್ತು ವಸತಿ ಶಾಲೆಗಳಲ್ಲಿ ವಾಸಿಸುತ್ತಿರುವ ಮಕ್ಕಳಲ್ಲಿ ಈ ಸೋಂಕು ಹೆಚ್ಚಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಶಾಲೆಗಳು ಮತ್ತು ಎಲ್ಲಾ ವಸತಿ ಶಾಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ ತಿಳಿಸಿದ್ದಾರೆ.

Madras Eye Disease Cases Increases In Chitradurga

ಕಣ್ಣಿನ ಸೋಂಕು ವೈರಾಣು ಸೋಂಕಾಗಿದ್ದು, ಒಬ್ಬರಿಂದ ಒಬ್ಬರಿಗೆ ಸೋಂಕಿರುವ ವ್ಯಕ್ತಿಯ ಕೈಗಳಿಂದ ಮತ್ತು ಅವರು ಬಳಸಿರುವ ಬಟ್ಟೆ ಹಾಗೂ ವಸ್ತುಗಳು ಸಂಪರ್ಕಕ್ಕೆ ಬಂದಾಗ ಈ ರೋಗಾಣು ಹರಡುತ್ತದೆ. ಸೋಂಕು ತಗುಲಿದಾಗ ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ನೀರು ಬರುವುದು, ಕಣ್ಣಿನಲ್ಲಿ ಪಿಚ್ಚುಗಟ್ಟುವುದು, ಕಣ್ಣಿನಲ್ಲಿ ಏನಾದರು ಬಿದ್ದಿರುವಂತಹ ಅನುಭವ ಇದರ ಲಕ್ಷಣವಾಗಿದೆ.

ಕಣ್ಣಿನ ಸೋಂಕು ಇರುವ ವಿದ್ಯಾರ್ಥಿಗಳಿಗೆ ರಜೆಯನ್ನು ನೀಡಿ ಇತರೆ ಬೇರೆ ಮಕ್ಕಳೊಂದಿಗೆ ಬೇರೆಯದೇ ಇರುವ ಬಗ್ಗೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಕಣ್ಣಿನ ಸೋಂಕು ಇರುವ ವಿದ್ಯಾರ್ಥಿಗಳು ಅಥವಾ ಅವರ ಪಾಲಕರಿಗೆ ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆಯಲು ಸೂಚಿಸಬೇಕು.

Madras Eye Disease Cases Increases In Chitradurga

ಯಾವುದೇ ಕಾರಣಕ್ಕೂ ವೈದ್ಯರ ಚೀಟಿಯನ್ನು ಪಡೆಯದೇ ಔಷಧಿ ಅಂಗಡಿಗಳಿಂದ ನೇರವಾಗಿ ಕಣ್ಣಿನ ಔಷಧಿಗಳನ್ನು ಪಡೆದು ಬಳಸಬಾರದು. ಎಲ್ಲಾ ವಿದ್ಯಾರ್ಥಿಗಳಿಗೆ ಆಗಾಗ್ಗೆ ಸೋಪ್ ನಿಂದ ಕೈತೊಳೆಯಲು ಅಥವಾ ಸಾನಿಟೈಜರ್ ಬಳಸಲು ತಿಳಿಸಬೇಕು. ಸೋಂಕಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಇತರರಿಂದ ದೂರವಿರುವರು ಮತ್ತು ಕನ್ನಡಕಗಳನ್ನು ಧರಿಸಿ, ಕಣ್ಣುಗಳ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ ಸೂಚಿಸಿದ್ದಾರೆ.

ಮದ್ರಾಸ್ ಐ ಸಮಸ್ಯೆ ಇರುವವರು ಇತರರಿಂದ ದೂರ ಇರಬೇಕು. ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ, ಮೊಬೈಲ್, ಕಂಪ್ಯೂಟರ್ ನೋಡುವುದು ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿ ಕೊಡಬೇಕು. ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಹತ್ತಿರ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ಇದು ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಮುಖ್ಯವಾಗಿದೆ.

English summary

Madras eye disease increases in Chitradurga . Here is the some precautions for Madras eye. Know more.

Story first published: Thursday, July 27, 2023, 13:56 [IST]

Source link