Last Updated:
ಪ್ರಗತಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪತಿಯೊಂದಿಗೆ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಮನಮುಟ್ಟುವ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
ಸ್ಯಾಂಡಲ್ವುಡ್ನಿಂದ ಪ್ಯಾನ್ ಇಂಡಿಯಾ ಮಟ್ಟದವರೆಗೆ ತಮ್ಮದೇ ಆದ ಛಾಪು ಮೂಡಿಸಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ಕಾಂತಾರ’ (Kantara) ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಿಷಬ್ ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಇದೀಗ ರಿಷಬ್ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಪತಿಗೆ ತುಂಬಾನೇ ವಿಭಿನ್ನವಾಗಿ ಶುಭಕೋರಿದ್ದಾರೆ.
ಪ್ರಗತಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪತಿಯೊಂದಿಗೆ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಮನಮುಟ್ಟುವ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
ಪ್ರತಿದಿನವನ್ನೂ ಇನ್ನಷ್ಟು ಸುಂದರವಾಗಿಸುವ ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನೀವು ನನ್ನ ಜೀವನವನ್ನು ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸುಂದರವಾಗಿಸಿದ್ದೀರಿ. ನಿಮ್ಮ ಪ್ರೀತಿಯೇ ನನ್ನ ಬದುಕಿನ ಬೆಳಕು ಮತ್ತು ಶಾಂತಿ. ಇಂದು ನಾನು ಏನಾಗಿದ್ದೇನೋ ಅದಕ್ಕೆ ನಿಮ್ಮ ಪ್ರೋತ್ಸಾಹ ಮತ್ತು ವಿಶ್ವಾಸವೇ ಕಾರಣ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ನನ್ನ ಸಂಗಾತಿಯಾಗಿ, ನನ್ನ ಅತಿದೊಡ್ಡ ಬೆಂಬಲವಾಗಿ ನೀವು ಯಾವಾಗಲೂ ನನ್ನ ಜೊತೆ ನಿಂತಿದ್ದೀರಿ. ನನ್ನ ಪುಟ್ಟ ಪ್ರಪಂಚವನ್ನು ಅಂತ್ಯವಿಲ್ಲದ ಅವಕಾಶಗಳ ಸಾಗರವಾಗಿ ಬದಲಾಯಿಸಿದ ವ್ಯಕ್ತಿ ನೀವು. ನನ್ನ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ನಿಮ್ಮ ಬೆಂಬಲವೇ ನನಗೆ ಆತ್ಮವಿಶ್ವಾಸ ನೀಡಿದೆ ಎಂದು ಹೇಳಿದ್ದಾರೆ.
ಹಾಗೆಯೇ ನಮ್ಮ ಬದುಕಿನಲ್ಲಿ ಸಂತೋಷದ ಕ್ಷಣಗಳಿದ್ದವು, ಸವಾಲುಗಳಿದ್ದವು, ನಗು ಕಣ್ಣೀರೂ ಇತ್ತು. ಕೆಲವೊಮ್ಮೆ ಭಿನ್ನಾಭಿಪ್ರಾಯಗಳೂ ಬಂದವು. ಆದರೆ ಎಲ್ಲದರ ನಡುವೆ ಪರಸ್ಪರ ಅರ್ಥೈಸಿಕೊಳ್ಳುವ ಮನಸ್ಸು ಮತ್ತು ಎಂದಿಗೂ ಕಡಿಮೆಯಾಗದ ಪ್ರೀತಿಯೇ ನಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಗತಿ ಶೆಟ್ಟಿ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಪೋಸ್ಟ್ಗೆ ಸಾವಿರಾರು ಲೈಕ್ಗಳು ಮತ್ತು ಕಾಮೆಂಟ್ಗಳನ್ನು ಮಾಡುತ್ತಿದ್ದು, ರಿಷಬ್ ಶೆಟ್ಟಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
ರಿಷಬ್ ಶೆಟ್ಟಿ ಅವರ ವೃತ್ತಿಜೀವನದ ಯಶಸ್ಸಿನ ಹಿಂದೆ ಕುಟುಂಬದ ಬೆಂಬಲವೂ ಪ್ರಮುಖ ಪಾತ್ರ ವಹಿಸಿದೆ ಎಂಬುದನ್ನು ಪ್ರಗತಿ ಶೆಟ್ಟಿ ಅವರ ಈ ಸಂದೇಶ ಮತ್ತೊಮ್ಮೆ ಸಾಬೀತುಪಡಿಸಿದೆ. ಪತ್ನಿಯ ಪ್ರೀತಿಯ ಮಾತುಗಳು ರಿಷಬ್ ಅವರ ಹುಟ್ಟುಹಬ್ಬದ ಸಂಭ್ರಮವನ್ನು ಇನ್ನಷ್ಟು ವಿಶೇಷವಾಗಿಸಿದ್ದು, ಅಭಿಮಾನಿಗಳ ಮನ ಗೆದ್ದಿವೆ.
Bangalore [Bangalore],Bangalore,Karnataka













