Last Updated:
ಪಿಂಪ್ರಿ ಚಿಂಚ್ವಾಡ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪರಿಣಾಮ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೃಹತ್ ಕಸದ ದಿಬ್ಬ ಕುಸಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 16 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪುಣೆ: ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ನಲ್ಲಿ ಬುಧವಾರ ಭಾರೀ ಮಳೆಯಾದ ಕಾರಣ ಭಾರಿ ಅವಘಡ (Building Collapse) ಸಂಭವಿಸಿದೆ ಎಂದು ವರದಿಯಾಗಿದೆ.
ಪಿಂಪ್ರಿ ಚಿಂಚ್ವಾಡ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೃಹತ್ ಕಸದ ದಿಬ್ಬ ಕುಸಿದು ಬಿದ್ದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 16 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
पुणे जिले के पिंपरी चिंचवड़ में तीन मंज़िला इमारत गिरी..
8 से 10 लोग मलबे में फंसे है.
रेस्क्यू और सर्च ऑपरेशन जारी. pic.twitter.com/fcsDzUac6j
— Vivek Gupta (@imvivekgupta) July 8, 2026
‘ಆಡಳಿತ ಕಟ್ಟಡವು ಪರ್ವತದಂತಹ ಎತ್ತರದ ತ್ಯಾಜ್ಯದ ರಾಶಿಯ ಪಕ್ಕದಲ್ಲಿದೆ. ಪ್ರಾಥಮಿಕವಾಗಿ, ಭಾರೀ ಮಳೆಯಿಂದಾಗಿ, ತ್ಯಾಜ್ಯ ದಿಬ್ಬವು ಸಡಿಲಗೊಂಡು ಕಟ್ಟಡದ ಮೇಲೆ ಕುಸಿದಿದೆ ಎಂದು ತೋರುತ್ತದೆ’ ಎಂದು ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ವಿಜಯ್ ಸೂರ್ಯವಂಶಿ ಹೇಳಿದರು.
ಖಾಸಗಿ ಕಂಪನಿಯ 16 ಉದ್ಯೋಗಿಗಳು ಕಟ್ಟಡದೊಳಗೆ ಇದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳ ತಂಡಗಳು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
New Delhi,New Delhi,Delhi













