Ramayana: ಕರಣ್ ಜೋಹರ್ ಕೈ ಸೇರಿದ ರಾಮಾಯಣ ಚಿತ್ರದ ವಿತರಣಾ ಹಕ್ಕು! ಕೋಟಿ ಕೋಟಿ ಡೀಲ್ | | ACTPnews

ಕರಣ್ ಜೋಹರ್


Last Updated:

ರಾಮಾಯಣ ಚಿತ್ರದ ಭಾರತದ ಥಿಯೇಟ್ರಿಕಲ್ ವಿತರಣೆಯ ಹಕ್ಕುಗಳು ಬಾಲಿವುಡ್‌ನ ಪ್ರಮುಖ ನಿರ್ಮಾಣ ಸಂಸ್ಥೆಯಾದ ಧರ್ಮ ಪ್ರೊಡಕ್ಷನ್ಸ್‌ಗೆ (Dharma Productions) ಸಿಕ್ಕಿರುವ ಸುದ್ದಿ ಸಿನಿ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕರಣ್ ಜೋಹರ್
ಕರಣ್ ಜೋಹರ್

ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಸಿನಿಮಾಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ರಾಮಾಯಣ (Ramayana) ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ಹೊಸ ಅಪ್‌ಡೇಟ್‌ಗಳಿಂದ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಈಗ ಚಿತ್ರದ ಭಾರತದ ಥಿಯೇಟ್ರಿಕಲ್ ವಿತರಣೆಯ ಹಕ್ಕುಗಳು ಬಾಲಿವುಡ್‌ನ ಪ್ರಮುಖ ನಿರ್ಮಾಣ ಸಂಸ್ಥೆಯಾದ ಧರ್ಮ ಪ್ರೊಡಕ್ಷನ್ಸ್‌ಗೆ (Dharma Productions) ಸಿಕ್ಕಿರುವ ಸುದ್ದಿ ಸಿನಿ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಪ್ರಾಜೆಕ್ಟ್‌ಗಳಲ್ಲಿ ಒಂದಾಗಿದೆ. ಈ ಚಿತ್ರವನ್ನು ನಿರ್ಮಾಪಕ ನಮಿತ್ ಮಲ್ಹೋತ್ರ ನಿರ್ಮಿಸುತ್ತಿದ್ದು, ಭಾರತದ ಥಿಯೇಟ್ರಿಕಲ್ ವಿತರಣೆಯ ಜವಾಬ್ದಾರಿಯನ್ನು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ ಸಂಸ್ಥೆ ವಹಿಸಿಕೊಂಡಿದೆ ಎನ್ನಲಾಗಿದೆ. ಅಧಿಕೃತ ಘೋಷಣೆ ಇನ್ನಷ್ಟೇ ಬರಬೇಕಿದ್ದರೂ, ಈ ಬೆಳವಣಿಗೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಮೂಲಗಳ ಪ್ರಕಾರ, ಆರಂಭದಲ್ಲಿ ರಾಮಾಯಣ ಚಿತ್ರದ ಭಾರತೀಯ ವಿತರಣಾ ಹಕ್ಕುಗಳಿಗಾಗಿ ಸುಮಾರು 500 ಕೋಟಿ ರೂಪಾಯಿಗಳ ಮಟ್ಟದಲ್ಲಿ ಮಾತುಕತೆ ನಡೆದಿತ್ತು. ಆದರೆ ಅಂತಿಮವಾಗಿ ನಿರ್ಮಾಪಕ ನಮಿತ್ ಮಲ್ಹೋತ್ರ ಹಾಗೂ ಧರ್ಮ ಪ್ರೊಡಕ್ಷನ್ಸ್ ನಡುವೆ ಸುಮಾರು 250 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವರದಿಯಾಗಿದೆ.

ರಾಮಾಯಣ ಚಿತ್ರವನ್ನು ಎರಡು ಭಾಗಗಳಲ್ಲಿ ನಿರ್ಮಿಸಲಾಗುತ್ತಿದೆ. ಮೊದಲ ಭಾಗವು 2026ರ ದೀಪಾವಳಿ ಸಂದರ್ಭದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಎರಡನೇ ಭಾಗವು 2027ರ ದೀಪಾವಳಿ ಹಬ್ಬದ ವೇಳೆಗೆ ಪ್ರೇಕ್ಷಕರ ಮುಂದೆ ಬರಲಿದೆ ಎನ್ನಲಾಗಿದೆ.

ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದರೆ, ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ. ಲಂಕಾಧಿಪತಿ ರಾವಣನ ಪಾತ್ರವನ್ನು ರಾಕಿಂಗ್ ಸ್ಟಾರ್ ಯಶ್ ನಿರ್ವಹಿಸುತ್ತಿರುವುದು ಅಭಿಮಾನಿಗಳಲ್ಲಿ ವಿಶೇಷ ಕುತೂಹಲ ಮೂಡಿಸಿದೆ.

ಭಾರತದಲ್ಲಿ ಧರ್ಮ ಪ್ರೊಡಕ್ಷನ್ಸ್ ಸಿನಿಮಾ ವಿತರಣೆ ಮಾಡಲಿದ್ದರೆ, ವಿದೇಶಿ ಮಾರುಕಟ್ಟೆಯಲ್ಲಿ ಜಾಗತಿಕ ಸಿನಿಮಾ ವಿತರಕ ಸಂಸ್ಥೆ ವಾರ್ನರ್ ಬ್ರದರ್ಸ್ ಚಿತ್ರದ ಬಿಡುಗಡೆಯ ಜವಾಬ್ದಾರಿಯನ್ನು ನಿರ್ವಹಿಸಲಿದೆ ಎಂದು ವರದಿಯಾಗಿದೆ.

ಇದರ ಮೂಲಕ ರಾಮಾಯಣ ಸಿನಿಮಾ ಉತ್ತರ ಅಮೆರಿಕಾ, ಯುರೋಪ್, ಮಧ್ಯಪ್ರಾಚ್ಯ, ಆಸ್ಟ್ರೇಲಿಯಾ ಸೇರಿದಂತೆ ಅನೇಕ ದೇಶಗಳಲ್ಲಿ ಭರ್ಜರಿ ಮಟ್ಟದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಭಾರತೀಯ ಪುರಾಣ ಕಥೆಯನ್ನು ವಿಶ್ವದ ಪ್ರೇಕ್ಷಕರಿಗೆ ತಲುಪಿಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಈ ಸಿನಿಮಾ ರೂಪುಗೊಳ್ಳುತ್ತಿದೆ.

ರಾಮಾಯಣ ಚಿತ್ರದ ಮತ್ತೊಂದು ವಿಶೇಷವೆಂದರೆ ಸಂಗೀತ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಹಾಗೂ ಹಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಹ್ಯಾನ್ಸ್ ಝಿಮ್ಮರ್ ಮೊದಲ ಬಾರಿಗೆ ಒಂದೇ ಸಿನಿಮಾಕ್ಕೆ ಜಂಟಿಯಾಗಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed