Last Updated:
ಬ್ಯಾಟಿಂಗ್ ಸ್ವರ್ಗ ಎಂದೇ ಹೆಸರಾಗಿರುವ ಈ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಭಾರತದ ಬೌಲಿಂಗ್ ದಾಳಿಗೆ ಸಿಲುಕಿ 258ಕ್ಕೆ ಆಲೌಟ್ ಆಯಿತು. 259 ರನ್ಗಳ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಇನ್ನೂ 28 ಎಸೆತಗಳಿರುವಂತೆ ಗೆಲುವು ಸಾಧಿಸಿತು.
ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ (India vs England) ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಪಡೆದುಕೊಂಡಿದೆ. ಬ್ಯಾಟಿಂಗ್ ಸ್ವರ್ಗ ಎಂದೇ ಹೆಸರಾಗಿರುವ ಈ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಭಾರತದ ಬೌಲಿಂಗ್ ದಾಳಿಗೆ ಸಿಲುಕಿ 258ಕ್ಕೆ ಆಲೌಟ್ ಆಯಿತು. 259 ರನ್ಗಳ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 45.2 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಗಿಲ್ 80, ಅಕ್ಷರ್ ಪಟೇಲ್ 57, ವಾಷಿಂಗ್ಟನ್ ಸುಂದರ್ ಅಜೇಯ 52 ರನ್ ಗಳಿಸಿ ಭಾರತಕ್ಕೆ 6 ವಿಕೆಟ್ಗಳ ಜಯ ತಂದುಕೊಟ್ಟರು.
ಇಂಗ್ಲೆಂಡ್ ನೀಡಿದ್ದ 259 ರನ್ಗಳ ಗುರಿ ಬೆನ್ನಟ್ಟಿದ ಭಾರತ ತಂಡ ಉತ್ತಮ ಆರಂಭ ಪಡೆದುಕೊಂಡಿತು. ರೋಹಿತ್ ಹಾಗೂ ಗಿಲ್ ಮೊದಲ ವಿಕೆಟ್ ಜೊತೆಯಾಟದಲ್ಲಿ 43 ರನ್ ಗಳ ಜೊತೆಯಾಟ ನೀಡಿದರು. ಆದರೆ ರೋಹಿತ್ ಶರ್ಮಾ 21 ಎಸೆತಗಳಲ್ಲಿ ಕೇವಲ 11 ರನ್ಗಳಿಸಿ ಔಟ್ ಆದರು. ರೋಹಿತ್ ಶರ್ಮಾ ಔಟಾದ ನಂತರ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ವಿರಾಟ್ ಕೊಹ್ಲಿ ಮೇಲೆ ಭಾರತ ತಂಡ ಹೆಚ್ಚಿನ ಭರವಸೆ ಹೊಂದಿತ್ತು. ಚೇಸಿಂಗ್ ಕಿಂಗ್ ಎಂದು ಕರೆಯಲ್ಪಡುವ ಕೊಹ್ಲಿ ತಂಡಕ್ಕೆ ಗೆಲುವು ತಂದುಕೊಡುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಕ್ರೀಸ್‌ಗೆ ಬಂದ ತಕ್ಷಣ ಒಂದು ರನ್ ಗಳಿಸುವ ಮೂಲಕ ಖಾತೆ ತೆರೆದ ಕೊಹ್ಲಿ, ಜೋಫ್ರಾ ಆರ್ಚರ್ ಬೌಲಿಂಗ್ನಲ್ಲಿ ಎಲ್‌ಬಿಡಬ್ಲ್ಯೂ ಬೌಲಿಂಗ್‌ಗೆ ಬಲಿಯಾದರು.
ಈ ಹಂತದಲ್ಲಿ ಒಂದಾದ ನಾಯಕ ಗಿಲ್ ಹಾಗೂ ಶ್ರೇಯಸ್ ಅಯ್ಯರ್ 103 ರನ್ಗಳ ಜೊತೆಯಾಟ ನೀಡಿ ಚೇತರಿಕೆ ನೀಡಿದರು. ಭಾರತವನ್ನ ಸುಸ್ಥಿತಿಗೆ ತಂದಿದ್ದ ಈ ಜೋಡಿ ಒಟ್ಟಿಗೆ ಪೆವಿಲಿಯನ್ ಸೇರಿಕೊಂಡರು. 75 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ಸಹಿತ 80 ರನ್ಗಳಿಸಿದ್ದ ಗಿಲ್ ರಿಟೈರ್ಡ್ ಹರ್ಟ್ ಆದರೆ ಶ್ರೇಯಸ್ ಅಯ್ಯರ್ 53 ಎಸೆತಗಳಲ್ಲಿ 2 ಬೌಂಡರಿಗಳ ಸಹಿತ 35 ರನ್ಗಳಿಸಿ ರನ್ ಔಟ್ ಆದರು. ನಂತರ ಬಂದ ಕೆಎಲ್ ರಾಹುಲ್ 3 ಎಸೆತಗಳಲ್ಲಿ ಕೇವಲ 1 ರನ್ಗಳಿಸಿ ಜೋಶ್ ಟಂಗ್ಗೆ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಒಂದಾದ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಮುರಿಯದ 5ನೇ ವಿಕೆಟ್ಗೆ 102 ರನ್ಗಳ ಜೊತೆಯಾಟ ನಡೆಸಿ ಭಾರತ ತಂಡಕ್ಕೆ 6 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು. ವಾಷಿಂಗ್ಟನ್ ಸುಂದರ್ 63 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 52 ರನ್‌ಗಳಿಸಿದರೆ, ಅಕ್ಷರ್ ಪಟೇಲ್ 52 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 57 ರನ್ಗಳಿಸಿ ಭಾರತ ತಂಡವನ್ನ ಗೆಲುವಿನ ಗಡಿ ದಾಟಿದರು.
ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್, ಜೋಶ್ ಟಂಗ್ ಹಾಗೂ ಸ್ಯಾಮ್ ಕರನ್ ತಲಾ ಒಂದು ವಿಕೆಟ್ ಪಡೆದರು.
ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಆರಂಭಿಕ ಕುಸಿತ ಅನುಭವಿಸಿತ್ತು. 107 ರನ್ಗಳಾಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಕುಸಿತ ಅನುಭವಿಸಿತ್ತು. ಆದರೆ ಅನುಭವಿ ಜೋ ರೂಟ್ (76*) ಮತ್ತು ಡಾಸನ್ (68) 121 ರನ್ಗಳ ಜೊತೆಯಾಟದ ಮೂಲಕ ಆಸರೆಯಾದರು. ಡಾಸೆನ್ 83 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಿತ 68 ರನ್‌ಗಳಿಸಿದರೆ, ರೂಟ್ 76 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 76 ರನ್ಗಳಿಸಿ 258 ರನ್ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.
ಭಾರತದ ಪರ ಅಕ್ಷರ್ ಪಟೇಲ್ 4 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಹಾಗೂ ಜಸ್ಪ್ರೀತ್ ಬುಮ್ರಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
Jul 14, 2026 11:22 PM IST














