Last Updated:
ಸರಣಿ ಗೆಲುವಿನ ಆಸೆ ಜೀವಂತವಾಗಿರಿಸಿಕೊಳ್ಳುವುದಕ್ಕೆ ಈ ಪಂದ್ಯ ಗೆಲ್ಲಲೇಬೇಕಾಗಿರುವುದರಿಂದ ಇಂಗ್ಲೆಂಡ್ ಚೇಸಿಂಗ್ ಮಾಡಲು ನಿರ್ಧರಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತ್ತು.
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ ಕಾರ್ಡಿಫ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸರಣಿ ಗೆಲುವಿನ ಆಸೆ ಜೀವಂತವಾಗಿರಿಸಿಕೊಳ್ಳುವುದಕ್ಕೆ ಈ ಪಂದ್ಯ ಗೆಲ್ಲಲೇಬೇಕಾಗಿರುವುದರಿಂದ ಇಂಗ್ಲೆಂಡ್ ಚೇಸಿಂಗ್ ಮಾಡಲು ನಿರ್ಧರಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಎರಡು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಗಸ್ ಅಟ್ಕಿನ್ಸನ್ ಹಾಗೂ ಸಾದಿಕ್ ಮಹ್ಮೂದ್ ತಂಡಕ್ಕೆ ಸೇರ್ಪಡೆಯಾದರೆ, ಲಿಯಾಮ್ ಡಾಸೆನ್ ಹಾಗೂ ಜೋಶ್ ಟಂಗ್ ಹೊರಗುಳಿದಿದ್ದಾರೆ. ಭಾರತ ಕೂಡ ಒಂದು ಬದಲಾವಣೆ ಮಾಡಿಕೊಂಡಿದೆ. ವಿಕೆಟ್ ಕೀಪರ್ ರಾಹುಲ್ ಅನಾರೋಗ್ಯದ ಕಾರಣದಿಂದ ಹೊರಗುಳಿದಿದ್ದಾರೆ. ಇವರ ಸ್ಥಾನಕ್ಕೆ ಇಶಾನ್ ಕಿಶನ್ ಎಂಟ್ರಿಕೊಟ್ಟಿದ್ದಾರೆ.
ಮೊದಲ ಏಕದಿನ ಪಂದ್ಯದಲ್ಲಿ 11 ರನ್ ಗಳಿಸಿದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಎಲ್ಲರ ಗಮನವಿದೆ. ಕಳೆದ ವರ್ಷ ಅಕ್ಟೋಬರ್ನಿಂದ ಇಲ್ಲಿಯವರೆಗೆ 13 ಏಕದಿನ ಪಂದ್ಯಗಳನ್ನು ಆಡಿರುವ ರೋಹಿತ್ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳ ಸಹಾಯದಿಂದ 46.91 ಸರಾಸರಿಯಲ್ಲಿ 563 ರನ್ ಗಳಿಸಿದ್ದಾರೆ. ಇದು ಉತ್ತಮ ದಾಖಲೆಯಾಗಿದೆಯಾದರೂ, ಭಾರತೀಯ ಡ್ರೆಸ್ಸಿಂಗ್ ರೂಮ್ ನಲ್ಲಿನ ಪ್ರಸ್ತುತ ಪರಿಸ್ಥಿತಿಯು ರೋಹಿತ್ ಗೆ ಬಹುತೇಕ ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವುದು ಅನಿವಾರ್ಯತೆ ಸೃಷ್ಟಿಸಿದೆ. ಮುಂದಿನ ಕೆಲವು ಪಂದ್ಯಗಳಲ್ಲಿ ವಿಫಲವಾದರೆ ರೋಹಿತ್ 2027 ರ ಏಕದಿನ ವಿಶ್ವಕಪ್ ರೇಸ್ ನಿಂದ ಹೊರಗುಳಿಯಲೂಬಹುದು ಎನ್ನಲಾಗುತ್ತಿದೆ.
ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಇಂಗ್ಲೆಂಡ್ ತಂಡ ಸರಣಿ ಗೆಲುವಿನ ಆಸೆಯನ್ನ ಜೀವಂತವಾಗಿರಲು ಇಂಗ್ಲೆಂಡ್ಗೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವೈಫಲ್ಯ ತಂಡಕ್ಕೆ ದೊಡ್ಡ ತಲೆನೋವಾಗಿದೆ. ಮೊದಲ ಪಂದ್ಯದಲ್ಲಿ ಜೋ ರೂಟ್ ಮತ್ತು ಲಿಯಾಮ್ ಡಾಸನ್ ತಂಡವನ್ನು ರಕ್ಷಿಸಿದ್ದರು. ಈ ಆದರೆ ಈ ಪಂದ್ಯದಲ್ಲಿ ಡಾಸೆನ್ ಕೈಬಿಟ್ಟಿರುವುದು ಅಚ್ಚರಿ ತಂದಿದೆ.
ಭಾರತ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್ (ವಿಕೀ), ಅಕ್ಷರ್ ಪಟೇಲ್, ಶಿವಂ ದುಬೆ, ಗುರ್ನೂರ್ ಬ್ರಾರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ,
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರ್ರನ್, ವಿಲ್ ಜಾಕ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಸಾಕಿಬ್ ಮಹಮೂದ್,














