Last Updated:
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಸಂಬಂಧ ಇಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ ಮತ್ತೊಮ್ಮೆ ಸಮಯಾವಕಾಶ ನೀಡಿ ಮಹತ್ವದ ತೀರ್ಪು ನೀಡಿದೆ.
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA Election) ಚುನಾವಣೆಗೆ ಇಡೀ ರಾಜ್ಯ ಕಾಯುತ್ತಿದೆ. ಇದೀಗ ಇಂದು ಈ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ (Supreme Court) ಅರ್ಜಿ ವಿಚಾರಣೆ ನಡೆದಿದ್ದು, ಮಹತ್ವದ ತೀರ್ಪು ಹೊರಬಂದಿದೆ. ಚುನಾವಣೆಗೆ ಕಾಲಾವಕಾಶ (Election Timeline) ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಿದ್ದು, ಮತ್ತೊಮ್ಮೆ ಸಮಯಾವಕಾಶ ನೀಡಿ ಮಹತ್ವದ ಆದೇಶ ಹೊರಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿ ಮತ್ತೊಮ್ಮೆ ಸಮಯಾವಕಾಶ ನೀಡಿದೆ. ಡಿಸೆಂಬರ್ 31ರ ತನಕ ಸಮಯ ನೀಡುವಂತೆ ಸರ್ಕಾರ ಮನವಿ ಮಾಡಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ.
ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾಗಿದ್ದರು. ಸರ್ಕಾರದ ವಕೀಲರು, ‘ರಾಜ್ಯದಲ್ಲಿ SIR ಪ್ರಕ್ರಿಯೆ ನಡೆಯುತ್ತಿದೆ. 1.03 ಕೋಟಿ ಮತದಾರರ ಮತ್ತು 40 ಲಕ್ಷ ಮನೆಗಳ ಪರಿಶೀಲನೆ ನಡೆಯುತ್ತಿದೆ. ಚುನಾವಣೆಗೆ ಭದ್ರತಾ ಸಿಬ್ಬಂದಿ ಹೊರತುಪಡಿಸಿ 60 ಸಾವಿರ ಸಿಬ್ಬಂದಿ ಅಗತ್ಯವಿದೆ. SIR ಪ್ರಕ್ರಿಯೆಯಿಂದ ಸಿಬ್ಬಂದಿ ಕೊರತೆ ಉಂಟಾಗಿದೆ’ ಎಂದು ವಾದಿಸಿದರು. ಹೀಗಾಗಿ ಚುನಾವಣಾ ಗಡುವು ವಿಸ್ತರಣೆ ಕೋರಿದರು.
ಈ ಹಿಂದೆ ಸುಪ್ರೀಂಕೋರ್ಟ್ ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ನಂತರ ಸುಪ್ರೀಂಕೋರ್ಟ್ ಡಿಸೆಂಬರ್ 31ರವರೆಗೆ ಸಮಯ ನೀಡಿದೆ. ಸರ್ಕಾರದ ವಾದ ಆಲಿಸಿದ ಸುಪ್ರೀಂ ಕೋರ್ಟ್ ಸರ್ಕಾರ ಡಿಸೆಂಬರ್ 31 ತನಕ ಸಮಯ ನೀಡುವಂತೆ ಮನವಿ ಮಾಡಿದ್ದರಿಂದ ಮತ್ತೆ ಡಿಸೆಂಬರ್ 31ರ ತನಕ ಸಮಯಾವಕಾಶ ನೀಡಿದೆ. ಇದೇ ಕೊನೆಯ ಅವಕಾಶ. ಮತ್ತೆ ಯಾವುದೇ ಕಾಲಾವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಈಗಾಗಲೇ ಜಿಬಿಎ ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ SIR ಪ್ರಕ್ರಿಯೆಯಿಂದ ಸಿಬ್ಬಂದಿ ಕೊರತೆ ಉಂಟಾಗಿದೆ. ಮನೆ-ಮನೆ ಪರಿಶೀಲನೆಯಿಂದ ಚುನಾವಣೆಗೆ ಸಿಬ್ಬಂದಿ ನಿಯೋಜಿಸುವುದು ಕಷ್ಟವಾಗುತ್ತಿದೆ ಎಂದು ಸರ್ಕಾರ ವಾದಿಸಿದೆ. ಕಪಿಲ್ ಸಿಬಲ್ ಅವರು ‘ಚುನಾವಣೆ ಮುಂದೂಡುವಂತೆ’ ಮನವಿ ಮಾಡಿದ್ದಾರೆ.
ಸದ್ಯ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಡಿಸೆಂಬರ್ 31ರವರೆಗೆ ಸಮಯಾವಕಾಶ ನೀಡಿದೆ. ಇದು ಕೊನೆಯ ಅವಕಾಶವಾಗಿದೆ ಎಂದು ನ್ಯಾಯಪೀಠ ಎಚ್ಚರಿಸಿದೆ. ಜಿಬಿಎ ಚುನಾವಣೆಯು ರಾಜ್ಯದ ಅಭಿವೃದ್ಧಿಗೆ ಮುಖ್ಯವಾಗಿದೆ. ಈ ಚುನಾವಣೆಯು ಸ್ಥಳೀಯ ಆಡಳಿತಕ್ಕೆ ಹೊಸ ದಿಕ್ಕು ನೀಡುವ ಸಾಧ್ಯತೆ ಇದೆ. ಆದರೆ ಸಿಬ್ಬಂದಿ ಕೊರತೆಯಿಂದ ಚುನಾವಣೆ ಮುಂದೂಡುವಂತೆ ಸರ್ಕಾರ ಮನವಿ ಮಾಡಿತ್ತು. ಹೀಗಾಗಿ ಚುನಾವಣೆ ಮುಂದೂಡಿಕೆ ಮಾಡಲಾಗಿದೆ.
(ವರದಿ: ಮುನಿರಾಜು, ನ್ಯೂಸ್18 ಕನ್ನಡ, ಬೆಂಗಳೂರು)














