Last Updated:
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಮುಂಚೆ ದೊಡ್ಡ ಹಿನ್ನಡೆ ಎದುರಿಸಿದೆ. ಈ ಪಂದ್ಯ ಜುಲೈ 19 ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗ ಮೂರು ಪಂದ್ಯಗಳ ಸರಣಿ 1-1 ರಲ್ಲಿ ಸಮಬಲದಲ್ಲಿದೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಮುಂಚೆ ದೊಡ್ಡ ಹಿನ್ನಡೆ ಎದುರಿಸಿದೆ. ಈ ಪಂದ್ಯ ಜುಲೈ 19 ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗ ಮೂರು ಪಂದ್ಯಗಳ ಸರಣಿ 1-1 ರಲ್ಲಿ ಸಮಬಲದಲ್ಲಿದೆ. ಇಂತಹ ಸಂದರ್ಭದಲ್ಲಿ ಭಾರತದ ಪ್ರಮುಖ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಿಂದ ಹೊರಗಿಡಲಾಗಿದೆ. ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಅವರಿಗೆ ಮಂಡಿಯ ಗಾಯವಾಗಿತ್ತು.
ಈ ಗಾಯದಿಂದಾಗಿ ವಾಷಿಂಗ್ಟನ್ ಸುಂದರ್ ಎರಡನೇ ಇನ್ನಿಂಗ್ಸ್‌ನಲ್ಲಿ ಫೀಲ್ಡಿಂಗ್ ಮಾಡಲು ಕೂಡ ಸಾಧ್ಯವಾಗಲಿಲ್ಲ. ಬಳಿಕ ಬೌಲಿಂಗ್ ಮಾಡಲು ಸಹ ಸಾಧ್ಯವಾಗಲಿಲ್ಲ. ಅವರು ಇಲ್ಲದ ಕಾರಣ ಭಾರತ ತಂಡವು ಕೇವಲ ಐದು ಬೌಲರ್‌ಗಳೊಂದಿಗೆ ಮಾತ್ರ ಆಡಬೇಕಾಯಿತು. ಸರಣಿ ಆರಂಭಕ್ಕೂ ಮುಂಚೆಯೇ ಗಾಯಗಳಿಂದಾಗಿ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರೂ ಈ ಸರಣಿಯಿಂದ ಹೊರಗುಳಿದ್ದರು. ಈ ಸಂದರ್ಭದಲ್ಲಿ ವಾಷಿಂಗ್ಟನ್ ಸುಂದರ್ ಹೊರಗುಳಿದಿರುವುದು ಭಾರತಕ್ಕೆ ಟೆನ್ಶನ್ ತರಿಸಿದೆ.
ಇಂಗ್ಲೆಂಡ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಭಾರತವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಭಾರತ ಮೊದಲ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದಿದ್ದರಿಂದ, ಈಗ ಮೂರು ಪಂದ್ಯಗಳ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಸರಣಿಯ ನಿರ್ಣಾಯಕ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 17 ರಂದು ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ವಾಷಿಂಗ್ಟನ್ ಸುಂದರ್ ಅವರ ಗಾಯ ಭಾರತ ತಂಡಕ್ಕೆ ದೊಡ್ಡ ಆಘಾತವಾಗಿದೆ.














