ಚುನಾವಣೆ ನಡೆಸದ ಕಾರಣ ಭಾರತ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದುಪಡಿಸಿದ ವಿಶ್ವ ಕುಸ್ತಿ ಒಕ್ಕೂಟ

ಭೂಪೇಂದರ್ ಸಿಂಗ್ ಬಾಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆ ನಡೆಸಲು 45 ದಿನಗಳ ಗಡುವನ್ನು ಗೌರವಿಸದ ಕಾರಣ, ಸೆಪ್ಟೆಂಬರ್ 16 ರಿಂದ ಪ್ರಾರಂಭವಾಗುವ ಒಲಿಂಪಿಕ್ ಅರ್ಹತಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕುಸ್ತಿಪಟುಗಳು ‘ತಟಸ್ಥ ಕ್ರೀಡಾಪಟುಗಳಾಗಿ’ ಸ್ಪರ್ಧಿಸಬೇಕಾಗುತ್ತದೆ. ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಕಾರಣ ಫೆಡರೇಷನ್ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್​​​ ಭೂಷಣ್ ಶರಣ್ ಸಿಂಗ್ ರಾಜೀನಾಮೆ ನೀಡಿದ್ದರು.

Source link