India vs Zimbabwe: ಜಿಂಬಾಬ್ವೆ ಪ್ರವಾಸದಿಂದ ಗಂಭೀರ್ ಔಟ್! ಭಾರತ ತಂಡದ ಜೊತೆ ಹೊರಟ ಹೊಸ ಕೋಚ್​ ಯಾರು ಗೊತ್ತಾ? | ಕ್ರೀಡಾ ಸುದ್ದಿ | ACTPnews

ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್


Last Updated:

ಗಂಭೀರ್ ಪ್ರಸ್ತುತ ಏಕದಿನ ತಂಡದೊಂದಿಗೆ ಇಂಗ್ಲೆಂಡ್‌ನಲ್ಲಿದ್ದಾರೆ. ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 23 ರಂದು ಪ್ರಾರಂಭವಾಗುತ್ತದೆ.

ಟೀಮ್ ಇಂಡಿಯಾ
ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧದ (India vs England) ಮೂರು ಪಂದ್ಯಗಳ ಏಕದಿನ ಸರಣಿ (ODI Series) ನಡೆಯುತ್ತಿರುವಾಗಲೇ ಭಾರತದ ಟಿ20 ತಂಡ ಜಿಂಬಾಬ್ವೆಗೆ (Zimbabwe Series) ತೆರಳಿದೆ. ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಆಟಗಾರರ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದೆ. ಅಚ್ಚರಿ ವಿಷಯವೆಂದರೆ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambgir) ಇಲ್ಲದೆ ಟಿ20 ಜಿಂಬಾಬ್ವೆಗೆ ಪ್ರಯಾಣ ಬೆಳೆಸಿದೆ. ಗಂಭೀರ್ ಪ್ರಸ್ತುತ ಏಕದಿನ ತಂಡದೊಂದಿಗೆ ಇಂಗ್ಲೆಂಡ್‌ನಲ್ಲಿದ್ದಾರೆ. ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 23 ರಂದು ಪ್ರಾರಂಭವಾಗುತ್ತದೆ. ಹಾಗಾಗಿ ಗಂಭೀರ್ ಅನುಪಸ್ಥಿತಿಯಲ್ಲಿ, ವಿವಿಎಸ್ ಲಕ್ಷ್ಮಣ್ (VVS Laxman) ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಟಿ20ಯಲ್ಲಿ ಭಾರತ ನಿರಾಶಾದಾಯಕ ಪ್ರದರ್ಶನ

ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ತುಂಬಾ ನಿರಾಶಾದಾಯಕವಾಗಿತ್ತು. ಶ್ರೇಯಸ್​​ ಪಡೆ 0-4 ಅಂತರದಲ್ಲಿ ಆಂಗ್ಲರ ಹೀನಾಯ ಸೋಲನ್ನು ಅನುಭವಿಸಿತ್ತು. ಇದಕ್ಕೂ ಮುನ್ನ ಐರ್ಲೆಂಡ್ ವಿರುದ್ಧವೂ 0-2ರಲ್ಲಿ ಸೋಲು ಕಂಡಿತ್ತು. ಇದಲ್ಲದೆ, ಜಿಂಬಾಬ್ವೆ ಪ್ರವಾಸಕ್ಕಾಗಿ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ ಮತ್ತು ಹೊಸ ಮುಖಗಳನ್ನು ಸೇರಿಸಲಾಗಿದೆ. ಹಾಗಾಗಿ 3ನೇ ಟಿ20 ಸರಣಿಯಲ್ಲೂ ನಾಯಕ ಶ್ರೇಯಸ್ ಅಯ್ಯರ್​ಗೆ ಹೊಸ ಸವಾಲು ಎದುರಾಗಲಿದೆ.

ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು

ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ 15 ವರ್ಷದ ವೈಭವ್ ಸೂರ್ಯವಂಶಿ ಹೆಚ್ಚಿನ ಯಶಸ್ಸನ್ನು ಗಳಿಸುವಲ್ಲಿ ವಿಫಲರಾದರು. ಈಗ, ಜಿಂಬಾಬ್ವೆ ಪ್ರವಾಸದಲ್ಲಿ ತಮ್ಮನ್ನು ತಾವು ಸಾಬೀತುಪಡಿಸಲು ಅವರಿಗೆ ಉತ್ತಮ ಅವಕಾಶವಿದೆ. ಅವರು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳಲ್ಲಿ ಕೇವಲ 13, 14 ಮತ್ತು 15 ರನ್‌ಗಳನ್ನು ಗಳಿಸಿ ನಿರಾಶೆ ಮೂಡಿಸಿದ್ದರು. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೊದಲು, ವೈಭವ್ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೊನೆಯ ಋತುವಿನಲ್ಲಿ 776 ರನ್‌ಗಳನ್ನು ಗಳಿಸುವ ಮೂಲಕ ಗಮನ ಸೆಳೆದರು. ಇದು ಅವರನ್ನು ಟೀಮ್ ಇಂಡಿಯಾದಲ್ಲಿ ಸೇರಿಸಿಕೊಳ್ಳಲು ಕಾರಣವಾಯಿತು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅವರಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿಲ್ಲ.

ಟೀಮ್ ಇಂಡಿಯಾದ ಜಿಂಬಾಬ್ವೆ ಪ್ರವಾಸ ವೇಳಾಪಟ್ಟಿ

ಭಾರತ ತಂಡವು ಜಿಂಬಾಬ್ವೆ ಪ್ರವಾಸದಲ್ಲಿ ಮೂರು ಪಂದ್ಯಗಳ T20I ಸರಣಿಯನ್ನು ಆಡಲಿದೆ. ಮೊದಲ ಪಂದ್ಯ ಜುಲೈ 23 ರಂದು ನಡೆಯಲಿದೆ. ಎರಡನೇ ಪಂದ್ಯ ಜುಲೈ 25 ರಂದು ನಡೆಯಲಿದೆ. ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 26 ರಂದು ನಡೆಯಲಿದೆ. ಎಲ್ಲಾ ಮೂರು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿವೆ.

ಜಿಂಬಾಬ್ವೆ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡ

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ, ರಿಂಕು ಸಿಂಗ್, ಅಭಿಷೇಕ್ ಶರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ಹರ್ಷ್ ದುಬೆ, ಇಶಾನ್ ಕಿಶನ್, ಪ್ರಭಸಿಮ್ರನ್ ಸಿಂಗ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಮಯಾಂಕ್ ಯಾದವ್, ಅಶೋಕ್ ಶರ್ಮಾ, ರವಿ ಬಿಷ್ಣೋಯ್.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed