Last Updated:
ಭಾರತ ತಂಡ ಆಗಸ್ಟ್ 4 ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದೆ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಈ ಸರಣಿಯಲ್ಲಿ ತಂಡಕ್ಕೆ ಮರಳುವ ಸಾಧ್ಯತೆಯಿದೆ. ವಾಷಿಂಗ್ಟನ್ ಸುಂದರ್ ಲಭ್ಯವಿಲ್ಲದಿದ್ದರೆ, ಹರ್ಷ್ ದುಬೆ ಸ್ಥಾನವನ್ನು ಉಳಿಸಿಕೊಳ್ಳಬಹುದು.
ವಿಶ್ವಟೆಸ್ಟ್ ಚಾಂಪಿಯನ್ಶಿಪ್ (WTC) ಭಾಗವಾಗಿ ಭಾರತ ತಂಡ ಶ್ರೀಲಂಕಾ (India vs England) ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಸರಣಿಗೆ ಅಜಿತ್ ಅಗರ್ಕರ್ (Ajit Agarkar) ನೇತೃತ್ವದ ಆಯ್ಕೆ ಸಮಿತಿಯು ಭಾರತೀಯ ತಂಡವನ್ನು ಈ ವಾರಂತ್ಯದೊಳಗೆ ಪ್ರಕಟಿಸುವ ಸಾಧ್ಯತೆಯಿದೆ. ಸರಣಿಯು ಆಗಸ್ಟ್ 15 ರಂದು ಗಾಲೆಯಲ್ಲಿ ಪ್ರಾರಂಭವಾಗಲಿದೆ. ಇಂಗ್ಲೆಂಡ್ ಪ್ರವಾಸದ ಏಕದಿನ ಪಂದ್ಯದ ಸಮಯದಲ್ಲಿ ಈ ಸರಣಿಯ ಕುರಿತು ಚರ್ಚೆಗಳು ನಡೆದಿದ್ದು, ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದ ವಾಷಿಂಗ್ಟನ್ ಸುಂದರ್ ಅವರ ಅಂತಿಮ ಫಿಟ್ನೆಸ್ ವರದಿಗಾಗಿ ಆಯ್ಕೆದಾರರು ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದ ಸಮಯದಲ್ಲಿ ಸುಂದರ್ ಬಲ ತೊಡೆಯ ಸ್ನಾಯುವಿನ ಗಾಯಕ್ಕೆ ಒಳಗಾಗಿದ್ದರು. ಸ್ಕ್ಯಾನ್ಗಳಲ್ಲಿ ಗ್ರೇಡ್ 1 ಗಾಯ ಕಂಡುಬಂದಿದೆ ಮತ್ತು ವೈದ್ಯರು ನಾಲ್ಕು ವಾರಗಳ ವಿಶ್ರಾಂತಿ ಅವಧಿಯನ್ನು ಸೂಚಿಸಿದ್ದಾರೆ, ಇದರಿಂದಾಗಿ ಅವರು ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು.
ಅವರು ಪ್ರಸ್ತುತ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ಅಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದ ನಿತೀಶ್, ಗಾಯದ ಕಾರಣದಿಂದಾಗಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಂದ ಹೊರಗುಳಿದಿದ್ದರು.ಇಬ್ಬರೂ ಆಟಗಾರರು ಗಾಯಗಳಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದರೆ ಮಾತ್ರ ಭಾರತೀಯ ತಂಡದಲ್ಲಿ ಸ್ಥಾನ ಪಡೆಯುತ್ತಾರೆ.
ಭಾರತ ತಂಡ ಆಗಸ್ಟ್ 4 ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದೆ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಈ ಸರಣಿಯಲ್ಲಿ ತಂಡಕ್ಕೆ ಮರಳುವ ಸಾಧ್ಯತೆಯಿದೆ. ವಾಷಿಂಗ್ಟನ್ ಸುಂದರ್ ಲಭ್ಯವಿಲ್ಲದಿದ್ದರೆ, ಹರ್ಷ್ ದುಬೆ ಸ್ಥಾನವನ್ನು ಉಳಿಸಿಕೊಳ್ಳಬಹುದು.
ಸ್ಟಾರ್ ಸ್ಪಿನ್ನರ್ಗಳಾದ ಮಾನವ್ ಸುತಾರ್ ಮತ್ತು ಕುಲದೀಪ್ ಯಾದವ್ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದಾರೆ. ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳುವ ನಿರೀಕ್ಷೆಯಿದ್ದರೂ, ಗುರ್ನೂರ್ ಬ್ರಾರ್ ಮತ್ತು ಪ್ರಸಿದ್ಧ್ ಕೃಷ್ಣ ಕೂಡ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಐಪಿಎಲ್ ನಂತರ ಒಂದೇ ಒಂದು ಪಂದ್ಯವನ್ನು ಆಡದಿದ್ದರೂ ಜಡೇಜಾ ಅವರನ್ನು ವಿಶ್ವದ ನಂಬರ್ ಒನ್ ಟೆಸ್ಟ್ ಸ್ಪಿನ್ನರ್ ಎಂದು ಅಗರ್ಕರ್ ಹೇಳಿದ್ದಾರೆ. ಹಾಗಾಗಿ ಜಡ್ಡು ಟೆಸ್ಟ್ ವಿಭಾಗದಲ್ಲಿ ತಂಡದ ಯೋಜನೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಗೌತಮ್ ಗಂಭೀರ್ ಅವರ ಅವಧಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಹೀನಾಯ ಸೋಲುಗಳನ್ನು ಅನುಭವಿಸಿದೆ. ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ 3-0 ಅಂತರದಲ್ಲಿ ವೈಟ್ವಾಶ್ ಮಾಡಿದ ನಂತರ, ತಂಡವು ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರೀ ಸೋಲನ್ನು ಎದುರಿಸಿತು. ಶ್ರೀಲಂಕಾ ವಿರುದ್ಧದ ಸರಣಿಯನ್ನು ಗೆಲ್ಲುವುದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪುವ ಟೀಮ್ ಇಂಡಿಯಾದ ಆಶಯಕ್ಕೆ ನಿರ್ಣಾಯಕವಾಗಿದೆ. ಈ ಸರಣಿಯ ನಂತರ, ಭಾರತ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ.
ಶುಭ್ಮನ್ ಗಿಲ್ (ನಾಯಕ), ಕೆ. ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರಿತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ ಮತ್ತು ಮಾನವ್ ಸುತಾರ್.
ವಾಷಿಂಗ್ಟನ್ ಸುಂದರ್ ಫಿಟ್ನೆಸ್ ಟೆಸ್ಟ್ ಕ್ಲಿಯರ್ ಮಾಡದಿದ್ದರೆ ಹರ್ಷ್ ದುಬೆ ಅವಕಾಶ ಪಡೆಯುವ ಸಾಧ್ಯತೆ ಇದೆ.














