ನನಗೆ ಯಾವುದೇ ಟಾಸ್ಕ್ ಕೊಟ್ಟಿರಲಿಲ್ಲ: ಸುಮ್ಮನೆ ಕೆಮ್ಮಿದ್ದಕ್ಕೆ ರೆಸಾರ್ಟ್‌ಗೆ ಓಡಿಹೋದರು: ಜಗದೀಶ್ ಶೆಟ್ಟರ್ | Jagadish Shettar Clarifies: No Task Given During Hubballi-Dharwad Municipal Corporation Election

Karnataka

oi-Naveen Kumar N

|

Google Oneindia Kannada News

ಹುಬ್ಬಳ್ಳಿ, ಜೂನ್ 26: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆಲುವು ಸಾಧಿಸುವ ಮೂಲಕ, ಅಧಿಕಾರವನ್ನು ಮರಳಿ ಪಡೆದುಕೊಂಡಿತ್ತು. ಇಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಟಾಸ್ಕ್ ನೀಡಲಾಗಿತ್ತು, ಅವರು ಇದರಲ್ಲಿ ವಿಫಲವಾಗಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಈ ಬಗ್ಗೆ ಈಗ ಸ್ವತಃ ಜಗದೀಶ್ ಶೆಟ್ಟರ್ ಅವರೇ ಟ್ವೀಟ್ ಮಾಡಿದ್ದು ಸ್ಪಷ್ಟನೆ ನೀಡಿದ್ದಾರೆ. ಮೇಯರ್ ಚುನಾವಣೆ ಸಂದರ್ಭದಲ್ಲಿ ನನಗೆ ಯಾವುದೇ ಜವಾಬ್ದಾರಿ ಕೊಟ್ಟಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.

Jagadish Shettar Clarifies

ನನಗೆ ಟಾಸ್ಕ್ ನೀಡಿದ್ದಾರೆ ಎನ್ನುವ ಸುದ್ದಿ ಕೇಳಿಯೇ ಬಿಜೆಪಿ ನಾಯಕರು ತಮ್ಮ ಪಾಲಿಕೆ ಸದಸ್ಯರನ್ನು ಶಿಫ್ಟ್ ಮಾಡಿದ್ದರು ಎಂದು ವ್ಯಂಗ್ಯವಾಡಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ದೊಡ್ಡ ಜವಾಬ್ದಾರಿ ಸಿಗುವ ಮುನ್ಸೂಚನೆ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜವಾಬ್ದಾರಿ ಹೊರಲು ಸಿದ್ಧ: ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜವಾಬ್ದಾರಿ ಹೊರಲು ಸಿದ್ಧ: ಜಗದೀಶ್ ಶೆಟ್ಟರ್

ಟ್ವೀಟ್‌ನಲ್ಲಿ ಹೇಳಿದ್ದೇನು?

“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಯಾರಿಗೂ ಯಾವುದೇ ಟಾಸ್ಕ್ ನೀಡಿರಲಿಲ್ಲ, ಕೇವಲ ಶೆಟ್ಟರ್ ಅವರಿಗೆ ಟಾಸ್ಕ್ ನೀಡಲಾಗಿದೆ ಎಂಬ ಸುದ್ದಿ ಹರಿದಾಡಿದವು. ಬಿಜೆಪಿಯಲ್ಲಿನ ಅಸಮಾಧಾನ ಹೆಚ್ಚಾದವು. ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯ ನಾಯಕರು ಪಾಲಿಕೆ ಸದಸ್ಯರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋದರು.ಸಣ್ಣದಾಗಿ ಕೆಮ್ಮಿದ್ದಕ್ಕೆ ರೆಸಾರ್ಟ್ ಗೆ ಓಡಿ ಹೋದರು ಇನ್ನೂ ದೊಡ್ಡದಾಗಿ ಸದ್ದು ಮಾಡಿದ್ದರೆ ಎಲ್ಲಿಗೆ ಹೋಗುತ್ತಿದ್ದರು ಗೊತ್ತಿಲ್ಲ. ಎಲ್ಲದಕ್ಕೂ ಕಾಲ ಕೂಡಿ ಬರಲಿದೆ.” ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಡಿಕೆ ಶಿವಕುಮಾರ್ ಟಾಸ್ಕ್ ಕೊಟ್ಟಿದ್ದರು ಎನ್ನುವ ವರದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಟಾಸ್ಕ್ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದರಲ್ಲಿ ಶೆಟ್ಟರ್ ಯಶಸ್ವಿಯಾದರೆ ಅವರಿಗೆ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ಸಿಗುತ್ತದೆ ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದು, ಶೆಟ್ಟರ್ ಅವರಿಗೆ ಮುಖಭಂಗವಾಗಿದೆ, ಕೊಟ್ಟ ಟಾಸ್ಕ್‌ನಲ್ಲಿ ವಿಫಲವಾಗಿದ್ದಾರೆ ಎಂದು ವರದಿಯಾಗಿತ್ತು.

ಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಆದರೂ ಹಿರಿಯ ನಾಯಕರನ್ನು ಕೈಬಿಡದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಪರಿಷತ್ ಉಪ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣನ ಕಮಕನಕೂರ್, ಎನ್‌.ಎಸ್‌. ಬೋಸರಾಜು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

English summary

Former CM Jagadish Shettar Clarifies No Task Given During Hubballi-Dharwad Municipal Corporation Mayor Election. He Says that time will come for Everything.

Story first published: Monday, June 26, 2023, 13:05 [IST]

Source link